ಯುನಿವೆಫ್: ಅ.10ರಂದು ಬಜ್ಪೆಯಲ್ಲಿ ಸೀರತ್ ಸಮಾವೇಶ
Update: 2025-10-09 18:47 IST
ಮಂಗಳೂರು: ಯುನಿವೆಫ್ ಕರ್ನಾಟಕ 19 ಸೆಪ್ಟೆಂಬರ್ 2025 ರಿಂದ 2 ಜನವರಿ 2026ರ ವರೆಗೆ ಶೋಷಿತ ಸಮಾಜ ಹಾಗೂ ಮಾನವ ಘನತೆ ಮತ್ತು ಪ್ರವಾದಿ ಮುಹಮ್ಮದ್ (ಸ) ಎಂಬ ಕೇಂದ್ರೀಯ ವಿಷಯದಲ್ಲಿ 100 ದಿನ ಗಳ ಕಾಲ ಹಮ್ಮಿಕೊಂಡಿರುವ 20ನೇ ವರ್ಷದ ‘ಅರಿಯಿರಿ ಮನುಕುಲದ ಪ್ರವಾದಿಯನ್ನು’ ಅಭಿಯಾನದ ಸೀರತ್ ಸಮಾವೇಶವು ಅ.10ರಂದು ಸಂಜೆ 7 ಗಂಟೆಗೆ ಬಜ್ಪೆ ಪೆಟ್ರೋಲ್ ಪಂಪ್ ಬಳಿ ಇರುವ ಲೈಕೋರಿಸ್ ಫ್ಲಾಟ್ ಮುಂಭಾಗದಲ್ಲಿ ಜರಗಲಿರುವುದು.
ದ. ಕ. ಮುಸ್ಲಿಮ್ ಜನಪ್ರತಿನಿಧಿಗಳ ಒಕ್ಕೂಟದ ಅಧ್ಯಕ್ಷ ಸಿರಾಜ್ ಬಜ್ಪೆ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಯುನಿವೆಫ್ ಅಧ್ಯಕ್ಷ ರಫೀಉದ್ದೀನ್ ಕುದ್ರೋಳಿ ಅವರು ಶೋಷಣೆಯ ವಿರುದ್ಧ ಪ್ರವಾದಿ (ಸ)ಯ ನಡೆ ಎಂಬ ವಿಷಯದಲ್ಲಿ ಬ್ಯಾರಿ ಭಾಷೆಯಲ್ಲಿ ಪ್ರಮುಖ ಭಾಷಣ ಮಾಡಲಿದ್ದಾರೆ ಎಂದು ಅಭಿಯಾನ ಸಂಚಾಲಕ ಯು. ಕೆ. ಖಾಲಿದ್ ತಿಳಿಸಿದ್ದಾರೆ.