ಎಸೆಸೆಲ್ಸಿ ಪರೀಕ್ಷೆ: ಸಯ್ಯಿದ್ ಮದನಿ ಚಾರಿಟೇಬಲ್ ಟ್ರಸ್ಟ್ ನ ಹಝ್ರತ್ ಶಾಲೆಗೆ 100% ಫಲಿತಾಂಶ

Update: 2024-05-09 18:20 GMT

ಉಳ್ಳಾಲ: ಸಯ್ಯಿದ್ ಮದನಿ ದರ್ಗಾ ಅಧೀನದ ಸಯ್ಯಿದ್ ಮದನಿ ಚಾರಿಟೇಬಲ್ ಟ್ರಸ್ಟ್ ನ ಕಲ್ಲಾಪು ಹಝ್ರತ್ ಸಯ್ಯಿದ್ ಮದನಿ ಆಂಗ್ಲ ಮಾಧ್ಯಮ ಶಾಲೆಯು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ 100 ಫಲಿತಾಂಶ ಪಡೆದಿರುತ್ತದೆ.

ಒಟ್ಟು 44 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 10 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 32 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಹಝ್ರತ್ ಹೆಣ್ಣು ಮಕ್ಕಳ ಫೌಢ ಶಾಲೆಯು 100% ಫಲಿತಾಂಶ ಪಡೆದಿರುತ್ತದೆ, 32 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಉಳ್ಳಾಲ ಹಝ್ರತ್ ಸಯ್ಯಿದ್ ಮದನಿ ಆಂಗ್ಲ ಮಾಧ್ಯಮ ಶಾಲೆಯು ಶೇ 99.2 ಫಲಿತಾಂಶ ಪಡೆದಿರುತ್ತದೆ, ಒಟ್ಟು 129 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 13 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 88 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಅಳೇಕಲ ಹಝ್ರತ್ ಸಯ್ಯಿದ್ ಮದನಿ ಆಂಗ್ಲ ಮಾಧ್ಯಮ ಶಾಲೆಯು ಶೇ 95 ಫಲಿತಾಂಶ ಪಡೆದಿರುತ್ತದೆ, ಒಟ್ಟು 38 ವಿದ್ಯಾರ್ಥಿ ಗಳು ಪರೀಕ್ಷೆಗೆ ಹಾಜರಾಗಿದ್ದು, 3 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 20 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಕೋಟೆಪುರ ಟಿಪ್ಪು ಸುಲ್ತಾನ್ ಫ್ರೌಢ ಶಾಲೆಯು ಶೇ 84 ಫಲಿತಾಂಶ ಪಡೆದಿರುತ್ತದೆ,ಒಟ್ಟು 43 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 10 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಹಳೇಕೋಟೆ ಸಯ್ಯಿದ್ ಮದನಿ ಫ್ರೌಢ ಶಾಲೆಯು ಶೇ 84 ಫಲಿತಾಂಶ ಪಡೆದಿರುತ್ತದೆ, ಒಟ್ಟು 31 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 8 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಉತ್ತಮ ಫಲಿತಾಂಶಕ್ಕೆ ಕಾರಣಕರ್ತರಾದ ಎಲ್ಲ ಭೋದಕ ಸಿಬ್ಬಂದಿ ವರ್ಗಕ್ಕೆ ಹಾಗೂ ವಿದ್ಯಾರ್ಥಿಗಳಿಗೆ ಸಯ್ಯಿದ್ ಮದನಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ಬಿ.ಜಿ ಹನೀಫ್ ಹಾಜಿ ಮತ್ತು ಸಮಿತಿ ಸದಸ್ಯರು ಅಭಿನಂದಿಸಿರುತ್ತಾರೆ ಎಂದು ಪ್ರಕಟನೆಗೆ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News