ಸಿಬಿಎಸ್‌ಇ ಪರೀಕ್ಷೆ| ಪ್ರೆಸ್ಟೀಜ್ ಇಂಟರ್ ನ್ಯಾಶನಲ್ ಸ್ಕೂಲ್ ಶೇ. 100 ಫಲಿತಾಂಶ
Update: 2025-05-13 19:09 IST
ರಾನಿಯಾ ಕಾಝಿಯಾ - ಆಯಿಷಾ ಸುಹಾ
ಮಂಗಳೂರು, ಮೇ 13: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್‌ನ (ಸಿಬಿಎಸ್‌ಇ) 10 ಮತ್ತು 12ನೇ ತರಗತಿಯ ಪರೀಕ್ಷೆಗಳಲ್ಲಿ ಪ್ರೆಸ್ಟೀಜ್ ಇಂಟರ್‌ನ್ಯಾಶನಲ್ ಸ್ಕೂಲ್ ಶೇ. 100 ಫಲಿತಾಂಶ ದಾಖಲಿಸಿಕೊಂಡಿದೆ.
ಪರೀಕ್ಷೆಗೆ ಹಾಜರಾದ 92 ವಿದ್ಯಾರ್ಥಿಗಳಲ್ಲಿ 52 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‌ನೊಂದಿಗೆ ಮತ್ತು ಉಳಿದ ವಿದ್ಯಾರ್ಥಿಗಳು ಪ್ರಥಮ ದರ್ಜೆ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
12ನೇ ತರಗತಿಯ ಪರೀಕ್ಷೆಯಲ್ಲಿ ರಾನಿಯಾ ಕಾಝಿಯಾ ಶೇ 94 ಅಂಕಗಳೊಂದಿಗೆ ಬ್ಯಾಚ್‌ನಲ್ಲಿ ಅಗ್ರಸ್ಥಾನ ಪಡೆದಿದ್ದಾರೆ ಮತ್ತು 10 ನೇ ತರಗತಿಯ ಆಯಿಷಾ ಸುಹಾ ಶೇ 96 ಅಂಕಗಳೊಂದಿಗೆ ಉತ್ತಮ ಸಾಧನೆ ಮಾಡಿದ್ದಾರೆ.