×
Ad

ಫಾದರ್ ಮುಲ್ಲರ್ ಹೋಮಿಯೋಪಥಿ ಕಾಲೇಜಿಗೆ 110 ರ‍್ಯಾಂಕ್

Update: 2024-02-09 19:15 IST

ಮಂಗಳೂರು: ಬೆಂಗಳೂರಿನ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ 2018ರ ಸೆಪ್ಟಂಬರ್‌ನಿಂದ 2022ರ ಜೂನ್‌ವರೆಗೆ ನಡೆಸಿರುವ ಹೋಮಿಯೋಪಥಿ ವೈದ್ಯಕೀಯ ವಿಭಾಗದ ಪರೀಕ್ಷೆಗಳಲ್ಲಿ ದೇರಳಕಟ್ಟೆಯ ಫಾದರ್ ಮುಲ್ಲರ್ ಹೋಮಿಯೋಪಥಿ ಮೆಡಿಕಲ್ ಕಾಲೇಜಿನ ಪದವಿಪೂರ್ವ ವಿದ್ಯಾರ್ಥಿಗಳು 10 ರ‍್ಯಾಂಕ್ ಗಳಲ್ಲಿ 7 ರ‍್ಯಾಂಕ್ ಗಳಿಸಿದ್ದಾರೆ.

ಮಾತ್ರವಲ್ಲದೆ, ವಿವಿಧ ಕೋರ್ಸ್‌ಗಳಲ್ಲಿ 21 ಹಾಗೂ ವಿಷಯವಾರು 82 ರ‍್ಯಾಂಕ್ ಗಳನ್ನು ಪಡೆದು ಒಟ್ಟು 110 ರ‍್ಯಾಂಕ್ಗಳನ್ನು ಸಂಸ್ಥೆಯ ವಿದ್ಯಾರ್ಥಿಗಳು ಪಡೆದಿದ್ದಾರೆ.

ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಯ ನಿರ್ದೇಶಕರಾದ ಅತೀ ವಂದನೀಯ ಫಾ. ರಿಚರ್ಡ್ ಅಲೋಶಿಯಸ್ ಕುವೆಲ್ಲೋ ಅವರು ರ‍್ಯಾಂಕ್ ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದು, ಪ್ರಾಂಶುಪಾಲರು ಮತ್ತು ಅಧ್ಯಾಪಕರ ಮಾರ್ಗದರ್ಶನವನ್ನು ಪತ್ರಿಕಾ ಪ್ರಕಟನೆಯ ಮೂಲಕ ಶ್ಲಾಘಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News