×
Ad

ವಿಕಲಚೇತನರ 13 ಯೋಜನೆಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನ

Update: 2024-07-03 19:56 IST

ಮಂಗಳೂರು: 2024-25ನೇ ಸಾಲಿನಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಅನುಷ್ಠಾನಗೊಂಡಿರುವ 13 ಫಲಾನುಭವಿ ಆಧಾರಿತ ಯೋಜನೆಗಳನ್ನು ಸುವಿಧಾ ಯೋಜನೆ ಡಿ.ಬಿ.ಟಿ (ನೇರ ನಗದು ವರ್ಗಾವಣೆ) ಮೂಲಕ ಆನ್ಲೈನ್ ವೇದಿಕೆಯಲ್ಲಿ ಅಳವಡಿಸಿ ಸೇವಾ ಸಿಂಧು ತಂತ್ರಾಂಶದಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ಯೋಜನೆಗಳ ವಿವರ ಇಂತಿವೆ-

ಪ್ರತಿಭಾವಂತ ಅಂಗವಿಕಲ ವಿದ್ಯಾರ್ಥಿಗಳಿಗೆ ಪ್ರೊತ್ಸಾಹಧನ ಯೋಜನೆ , ಶಿಶು ಪಾಲನ ಭತ್ಯೆ , ನಿರುದ್ಯೋಗ ಭತ್ಯೆ , ಆಧಾರ ಯೋಜನೆ , ಮರಣ ಪರಿಹಾರ ನಿಧಿ , ಸಾಧನೆ ಯೋಜನೆ , ಪ್ರತಿಭೆ ಯೋಜನೆ , ವೈದ್ಯಕೀಯ ಪರಿಹಾರ ನಿಧಿ ಯೋಜನೆ , ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್ಟಾಪ್ ಯೋಜನೆ , ದೈಹಿಕ ವಿಕಲಚೇತನರಿಗೆ ಯಂತ್ರ ಚಾಲಿತ ದ್ವಿಚಕ್ರ ವಾಹನ ಯೋಜನೆ , ಸಾಧನ ಸಲಕರಣೆಗಳ ಯೋಜನೆ , ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ ಯೋಜನೆ , ದೃಷ್ಟಿ ದೋಷ ಹೊಂದಿರುವ ವಿಕಲಚೇತನರಿಗೆ ಬ್ರೈಲ್ ಕಿಟ್ ಯೋಜನೆ.

ಅರ್ಹ ಅಭ್ಯರ್ಥಿಗಳು ಗ್ರಾಮ ಒನ್, ಕರ್ನಾಟಕ ಒನ್, ಮತ್ತು ಸೇವಾ ಸಿಂಧು ಪೋರ್ಟಲ್ karnataka.gov.in /Sevasindhu/DepartmentServicesKannada ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಅಗಸ್ಟ್ ೩೧ ಕೊನೆಯ ದಿನ.

ಹೆಚ್ಚಿನ ಮಾಹಿತಿಗೆ ವಿಕಲ ಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ, ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಕಚೇರಿ ಅಥವಾ ತಾಲೂಕು ಪುನರ್ವಸತಿ ಕಾರ್ಯಕರ್ತರು ಮಂಗಳೂರು-9110897458. ಬಂಟ್ವಾಳ-9164645616. ಪುತ್ತೂರು-9686682251. ಕಡಬ-7899588174. ಬೆಳ್ತಂಗಡಿ- 7975199473. ಸುಳ್ಯ-8105300057 ಸಂಪರ್ಕಿಸುವಂತೆ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News