ಜು. 13ರಂದು ನಾರಾಯಗುರು ಸಂದೇಶದ ಬಗ್ಗೆ ವಿಚಾರ ಸಂಕಿರಣ
ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರು ಅಧ್ಯಯನ ಪೀಠ ಮಂಗಳೂರು ವಿವಿ, ಗೋಕರ್ಣನಾಥೇಶ್ವರ ಶಿಕ್ಷಣ ಸಂಸ್ಥೆಗಳು, ನಾರಾಯಣ ಗುರು ಧರ್ಮ ಪ್ರಸರಣ ಸೇವಾ ಟ್ರಸ್ಟ್ ವತಿಯಿಂದ ಜು. 13ರಂದು ‘ವರ್ತಮಾನ ಕಾಲಘಟ್ಟದಲ್ಲಿ ಶ್ರೀ ನಾರಾಯಣಗುರುಗಳ ಸಂದೇಶ ಪ್ರಸ್ತುತತೆ’ ಎಂಬ ವಿಷಯದಲ್ಲಿ ರಾಜ್ಯ ಮಟ್ಟದ ವಿಚಾರ ಸಂಕಿರಣ ನಡೆಯಲಿದೆ.
ಬೆಳಗ್ಗೆ 9.30ರಿಂದ ಸಂಜೆ 4ರವರೆಗೆ ಗೋಕರ್ಣನಾಥೇಶ್ವರ ಕಾಲೇಜು ಸಭಾಂಗಣದಲ್ಲಿ ನಡೆಯಲಿರುವ ವಿಚಾರ ಸಂಕಿರಣವನ್ನು ಬೆಳಗ್ಗೆ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಉದ್ಘಾಟಿಸುವರು. ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಲ್. ಧರ್ಮ ಅಧ್ಯಕ್ಷತೆ ವಹಿಸುವರು ಎಂದು ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠದ ನಿರ್ದೇಶಕ ಡಾ. ಜಯರಾಜ್ ಎನ್. ತಿಳಿಸಿದರು.
ಪ್ರೆಸ್‌ಕ್ಲಬ್‌ನಲ್ಲಿ ಗುರುವಾರ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು, 11.20ರಿಂದ 12ರವರೆಗೆ ‘ಶೈಕ್ಷಣಿಕ ಪುನರುತ್ಥಾನ ಮತ್ತು ನಾರಾಯಣಗುರು’ ವಿಷಯದಲ್ಲಿ ವಿಶ್ರಾಂತ ಕುಲಪತಿ ಡಾ. ಕೆ. ಚಿನ್ನಪ್ಪ ಗೌಡ ವಿಚಾರ ಮಂಡಿಸುವರು ಎಂದರು.
12.10ರಿಂದ 12.50ವರೆಗೆ ‘ಸಾಮಾಜಿಕ ಸಾಮರಸ್ಯಕ್ಕೆ ಶ್ರೀ ನಾರಾಯಣ ಗುರು ಸೂತ್ರಗಳು’ ವಿಷಯದಲ್ಲಿ ಪತ್ರಕರ್ತ ಎನ್.ಎ.ಎಂ. ಇಸ್ಮಾಯಿಲ್ ಮಾತನಾಡುವರು. ಮಧ್ಯಾಹ್ನ 1.45ರಿಂದ 2.15ರವರೆಗೆ ನಿವೃತ್ತ ಪ್ರಾಧ್ಯಾಪಕಿ ಡಾ. ಮೀನಾಕ್ಷಿ ರಾಮಚಂದ್ರ ಅವರು ‘ಸರಳ ಧಾರ್ಮಿಕ ಅನುಷ್ಠಾನದಲ್ಲಿ ದೈವದಶಕಂ ಪ್ರಭಾವ’ ಎಂಬ ವಿಷಯ ಮಂಡಿಸಲಿರುವರು. 2.25ರಿಂದ ‘ಒಂದೇ ಜಾತಿ ಒಂದೇ ಮತ ಒಬ್ಬನೇ ದೇವರು’ ವಿಷಯದಲ್ಲಿ ಮುಕ್ತ ಸಂವಾದ ನಡೆಯಲಿದೆ.
ಸಂವಾದದಲ್ಲಿ ಚಿಂತಕರಾದ ಮುಲ್ಕಿ ಪ.ಪೂ. ಕಾಲೇಜಿನ ಡಾ. ವಾಸುದೇವ ಬೆಳ್ಳೆ, ಚೇಳ್ಯಾರು ಕಾಲೇಜಿನ ಪ್ರಾಂಶುಪಾಲೆ ಡಾ. ಜ್ಯೋತಿ ಚೇಳ್ಯಾರು, ಗೋಕರ್ಣನಾಥೇಶ್ವರ ಶಿಕ್ಷಣ ಸಂಸ್ಥೆಯ ನಿವೃತ್ತ ಡೀನ್ ಉಮ್ಮಪ್ಪ ಪೂಜಾರಿ ಪಾಲ್ಗೊಳ್ಳುವರು. ಸಮಾರೋಪದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠದ ನಿರ್ದೇಶಕ ಡಾ. ಜಯರಾಜ್ ಎನ್. ಸಮಾರೋಪ ಭಾಷಣ ಮಾಡಲಿದ್ದಾರೆ ಎಂದು ಅವರು ತಿಳಿಸಿದರು.
ಗೋಷ್ಟಿಯಲ್ಲಿ ಗೋಕರ್ಣನಾಥೇಶ್ವರ ಶಿಕ್ಷಣ ಸಂಸ್ಥೆಯ ಸಂಚಾಲಕ ವಸಂತ ಕಾರಂದೂರು, ನಾರಾಯಣಗುರು ಧರ್ಮ ಪ್ರಸರಣ ಸೇವಾ ಟ್ರಸ್ಟ್‌ನ ಅಧ್ಯಕ್ಷ ಹರೀಶ್ ಕೆ. ಪೂಜಾರಿ, ಗೋಕರ್ಣ ನಾಥೇಶ್ವರ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ನಾಗೇಶ್ ಕರ್ಕೇರ, ಅಧ್ಯಯನ ಪೀಠದ ಸ್ಥಾಪಕ ನಿರ್ದೇಶಕ ಮುದ್ದು ಮೂಡುಬೆಳ್ಳೆ, ಮಂಗಳೂರು ವಿವಿ ಸಿಂಡಿಕೇಟ್ ಸದಸ್ಯ ರಘುರಾಜ್ ಕದ್ರಿ, ಗೋಕರ್ಣ ನಾಥೇಶ್ವರ ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ಜಯಪ್ರಕಾಶ್ ಉಪಸ್ಥಿತರಿದ್ದರು.