ಎನ್‌ಡಿಎ ಪರೀಕ್ಷೆ: ಆಳ್ವಾಸ್ ಪಿಯು ಕಾಲೇಜಿನ 13 ವಿದ್ಯಾರ್ಥಿಗಳು ತೇರ್ಗಡೆ
Update: 2025-10-04 22:49 IST
ಮೂಡುಬಿದಿರೆ: ಯುಪಿಎಸ್‌ಸಿ ಮೂಲಕ ನಡೆದ ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಮತ್ತು ನೇವಲ್ ಅಕಾಡೆಮಿ ಪರೀಕ್ಷೆಯಲ್ಲಿ ಆಳ್ವಾಸ್ ಪಿಯು ಕಾಲೇಜಿನ 13 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.
ಹರ್ಷ ಎಂ, ಚಿನ್ಮಯ್ ಎಸ್, ಸಂಕೇತ್ ಭಟ್, ಸುಮಿತ್ ವಿ ಕೆ, ಹರ್ಷ ರೆಡ್ಡಿ, ಮೋಹಿತ್ ಕುಮಾರ್, ಪ್ರಣವ್ ವಿ ಪಂಡಿತ್, ಅಕ್ಷಯ್ ಭಾರದ್ವಾಜ್, ಅನುಷ್ ಅರುಣ್, ಪಿಯೂಷ್ ಹೆಚ್, ವಿಸ್ಮಯ ನಾರಾಯಣ್, ಮೆಲ್ರೊಯ್ ಕ್ಯಾಸ್ಟೆಲಿನೊ, ಇಶಾನ ಉತ್ತೀರ್ಣರಾಗಿದ್ದಾರೆ.
ಆಳ್ವಾಸ್ ಪಿಯು ಕಾಲೇಜಿನ ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗಾಗಿ ನಿರಂತರವಾಗಿ ವಿಶೇಷ ತರಬೇತಿ, ಅಣುಕು ಪರೀಕ್ಷೆ, ಮಾರ್ಗದರ್ಶನ ಕಾರ್ಯಾಗಾರಗಳನ್ನು ನಡೆಸುತ್ತಾ ವಿದ್ಯಾರ್ಥಿಗಳನ್ನು ಪರೀಕ್ಷೆ ಬರೆಯಲು ಸನ್ನದ್ಧರನ್ನಾಗಿಸುತ್ತಿದೆ.
ಎನ್‌ಡಿಎ ಪರೀಕ್ಷೆ ತೇರ್ಗಡೆಗೊಂಡ ವಿದ್ಯಾರ್ಥಿಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಅಭಿನಂದಿಸಿದ್ದಾರೆ.