ಉಳ್ಳಾಲ: ರಸ್ತೆಯಿಂದ 15 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದ ಕಾರು
Update: 2025-03-17 18:06 IST
ಉಳ್ಳಾಲ : ರಸ್ತೆಯಿಂದ 15 ಅಡಿ ಆಳದ ಕಂದಕಕ್ಕೆ ಕಾರು ಉರುಳಿ ಬಿದ್ದ ಘಟನೆ ನೇತ್ರಾವತಿ ನದಿ ಸಮೀಪದ ಕಲ್ಲಾಪು ಬಳಿ ನಡೆದಿದೆ.
ಅದೃಷ್ಟವಶಾತ್ ಕಾರಿನಲ್ಲಿದ್ದ ಐವರಿಗೆ ಸಣ್ಣ ಪುಟ್ಟ ಗಾಯವಾಗಿದ್ದು, ಪ್ರಾಣಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ತಲಪಾಡಿಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಕಾರು ರಾಷ್ಟ್ರೀಯ ಹೆದ್ದಾರಿ ಕಲ್ಲಾಪು ಬಳಿ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಈ ಅಪಘಾತ ಸಂಭವಿಸಿದೆ.
ಈ ಘಟನೆ ಕುರಿತು ಮಂಗಳೂರು ದಕ್ಷಿಣ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.