×
Ad

ಮೇ 16: ಗ್ರಾಮಚಾವಡಿ ಬ್ರಹ್ಮಶ್ರೀ ನಾರಾಯಣಗುರು ಸಮುದಾಯ ಭವನದ ಲೋಕಾರ್ಪಣಾ ಸಮಾರಂಭ

Update: 2025-05-13 22:09 IST

ಉಳ್ಳಾಲ: ಕೊಣಾಜೆ ಗ್ರಾಮಚಾವಡಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಇದರ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನದ ಲೋಕಾರ್ಪಣಾ ಸಮಾರಂಭವು ಮೇ16ರ ಬೆಳಿಗ್ಗೆ 10.30ಕ್ಕೆ ನಡೆಯಲಿದ್ದು, ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಸಮುದಾಯ ಭವನದ ಲೋಕಾರ್ಪಣೆಗೊಳಿಸಲಿದ್ದಾರೆ ಎಂದು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಗ್ರಾಮಚಾವಡಿ ಕೊಣಾಜೆ ಅಧ್ಯಕ್ಷ ರವೀಂದ್ರ ಬಂಗೇರ ತಿಳಿಸಿದ್ದಾರೆ.

ಕಾರ್ಯಕ್ರಮದ ಪ್ರಯುಕ್ತ ತೊಕ್ಕೊಟ್ಟು ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಮೇ 15 ಹಾಗೂ ಮೇ 16ರಂದು ವಿವಿಧ ವೈದಿಕ , ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಮೇ 16ರಂದು ಬೆಳಿಗ್ಗೆ 10.30ಕ್ಕೆ ಸಮುದಾಯ ಭವನದ ಲೋಕಾರ್ಪಣೆ ಹಾಗೂ ಸಭಾಕಾರ್ಯಕ್ರಮ ನಡೆಯಲಿದೆ. ಶ್ರೀ ಕಾಳಿಕಾಂಬಾ ಆಂಜನೇಯ ದೇವಸ್ಥಾನ ಮಾಣಿಲ ಕುಕ್ಕಾಜೆ ಇದರ ಧರ್ಮದರ್ಶಿ ಶ್ರೀ ಕೃಷ್ಣ ಗುರೂಜಿ ಆಶೀರ್ವಚನಗೈಯ್ಯಲಿದ್ದು , ಗೃಹ ಸಚಿವರಾದ ಡಾ.ಜಿ. ಪರಮೇಶ್ವರ್ ಸಮಾರಂಭವನ್ನು ಉದ್ಘಾಟಿಸಲಿದ್ದಾರೆ .

ಸಭಾಧ್ಯಕ್ಷರಾದ ಯು.ಟಿ. ಖಾದರ್ ಘನ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಲಿದೆ.ಉಡುಪಿ-ಚಿಕ್ಕಮಗಳೂರು ಲೋಕಸಭಾ ಸದಸ್ಯರರಾದ ಕೋಟ ಶ್ರೀನಿವಾಸ ಪೂಜಾರಿ ಗಣ್ಯರನ್ನು ಸನ್ಮಾನಿಸಲಿದ್ನೆರವೇರಿಸಲಿದ್ದಾರೆ ಎಂದರು.

ಮುಖ್ಯ ಅತಿಥಿಗಳಾಗಿ ಸಂಸದ ಬ್ರಿಜೇಶ್ ಚೌಟ, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು, ಮಾಜಿ ಸಂಸದ ನಳೀನ್ ಕುಮಾರ್ ಕಟೀಲು, ಗೋಕರ್ಣನಾಥೇಶ್ವರ ದೇವಸ್ಥಾನ ಕುದ್ರೋಳಿ ಇದರ ಕೋಶಾಧಿಕಾರಿ ಪದ್ಮರಾಜ್ ಆರ್.ಮತ್ತಿತರರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಸಂಜೆ 4 ಗಂಟೆಯಿಂದ ಪಾವೂರು, ಹರೇಕಳ. ಕೊಣಾಜೆ, ಪಜೀರು ಹಾಗೂ ಬೋಳಿಯಾರು ಗ್ರಾಮಗಳ ಹಾಗೂ ಮಹಿಳಾ ಘಟಕದ ವತಿಯಿಂದ ವೈವಿಧ್ಯಮಯ ಕಾರ್ಯಕ್ರಮ ಮತ್ತು 5 ರಿಂದ ಯುವವಾಹಿನಿ ಗ್ರಾಮಚಾವಡಿ ಕೊಣಾಜೆ ಘಟಕ ಇದರ ಸದಸ್ಯರಿಂದ ಸಾಂಸ್ಕೃತಿಕ ವೈಭವ ನಡೆಯಲಿರುವುದು ಎಂದರು.

ಸುದ್ದಿ ಗೋಷ್ಠಿ ಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಗ್ರಾಮಚಾವಡಿ ಕೊಣಾಜೆ ಇದರ ಕೋಶಾಧಿಕಾರಿ ಸುರೇಶ್ ಪೂಜಾರಿ, ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನ ಲೋಕಾರ್ಪಣಾ ಸಮಿತಿ ಗೌರವ ಅಧ್ಯಕ್ಷ ಲಕ್ಷ್ಮಣ ಕೋಟ್ಯಾನ್ ಪಾವೂರು, ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನ ಲೋಕಾರ್ಪಣಾ ಸಮಿತಿ ಗೌರವ ಸಲಹೆಗಾರರಾದ ಲಕ್ಷ್ಮಣ ಸಾಲಿಯಾನ್ ಪಜೀರ್, ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನ ಲೋಕಾರ್ಪಣಾ ಸಮಿತಿ ಪ್ರಧಾನ ಕಾರ್ಯದರ್ಶಿ ಅಜಿತ್ ಪೂಜಾರಿ ಪಜೀರು, ಬ್ರಹ್ಮಶ್ರೀ ನಾರಾಯಣ ಗುರು ಮಹಿಳಾ ಘಟಕದ ಅಧ್ಯಕ್ಷರಾದ ಗೀತಾ ಡಿ. ಕುಂದರ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News