ಮೇ 17 ರಂದು ಅಂತರ್ ವೈದ್ಯಕೀಯ ಕಾಲೇಜು ರಸಪ್ರಶ್ನೆ ಸ್ಪರ್ಧೆ
ಮಂಗಳೂರು : ಕಣಚೂರು ವೈದ್ಯಕೀಯ ಶಿಕ್ಷಣ ಮಹಾವಿದ್ಯಾಲಯದ ವೈದ್ಯಕೀಯ ಶಾಸ್ತ್ರ ವಿಭಾಗದ ಆಶ್ರಯದಲ್ಲಿ ಸ್ನಾತಕೋತ್ತರ ವೈದ್ಯಕೀಯ ಶಾಸ್ತ್ರ ಶಿಕ್ಷಣ ವಿದ್ಯಾರ್ಥಿಗಳಿಗಾಗಿ 4ನೇ ರಾಜ್ಯ ಮಟ್ಟದ ಅಂತರ್ ವೈದ್ಯಕೀಯ ಕಾಲೇಜು ರಸ ಪ್ರಶ್ನೆ ಸ್ಪರ್ಧೆ ಕಿಮ್ಸ್ ಪಿ.ಜಿ. ಮೆಡಿಕ್ವಿಜ್ ಮೇ 17 ರಂದು ಬೆಳಗ್ಗೆ 10 ಗಂಟೆಗೆ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಕಣಚೂರು ವೈದ್ಯಕೀಯ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಹಾಜಿ ಯು.ಕೆ. ಮೋನು ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಸ್ಪರ್ಧಾ ವಿಜೇತರಿಗೆ ಬಹುಮಾನ ಹಾಗೂ ಪ್ರಶಸ್ತಿ ಪ್ರಮಾಣ ಪತ್ರವನ್ನು ಪ್ರದಾನ ಮಾಡಲಿರುವರು.
ಕಾರ್ಯನಿರ್ವಾಹಕ ನಿರ್ದೇಶಕ ಡಾ. ಅಬ್ದುಲ್ ರೆಹಮಾನ್, ಪ್ರಾಂಶುಪಾಲರಾದ ಡಾ. ಶಹನವಾಜ್ ಮಣಿಪಾಡಿ, ವೈದ್ಯಕೀಯ ಅಧೀಕ್ಷಕ ಡಾ. ಹರೀಶ್ ಶೆಟ್ಟಿ, ಮುಖ್ಯ ಆಡಳಿತ ಅಧಿಕಾರಿ ಡಾ. ರೋಹನ್ ಮೋನಿಸ್ ಮತ್ತು ಕಣಚೂರು ಆರೋಗ್ಯ ವಿಜ್ಞಾನ ಸಂಸ್ಥೆ ಸಮಿತಿಯ ಅಧ್ಯಕ್ಷ ಡಾ. ಮುಹಮ್ಮದ್ ಇಸ್ಮಾಯಿಲ್ ಹಾಗೂ ಸದಸ್ಯ ಡಾ. ಎಂ. ವಿ. ಪ್ರಭು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿರುವರು.
ಹೆಚ್ಚಿನ ಮಾಹಿತಿ, ವಿವರಗಳಿಗಾಗಿ ಸ್ಪರ್ಧಾಕೂಟದ ಸಂಘಟಕರು ಹಾಗೂ ವೈದ್ಯಕೀಯ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ದೇವದಾಸ್ ರೈ, 98450 81145, ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.