×
Ad

ಉಪ್ಪಿನಂಗಡಿ| ಸೆ.17ರಂದು ತಾಲೂಕು ಮಟ್ಟದ ಮ್ಯಾಟ್ ಕಬಡ್ಡಿ ಪಂದ್ಯಾಟ

Update: 2025-09-14 21:56 IST

ಉಪ್ಪಿನಂಗಡಿ: ಪದವಿ ಪೂರ್ವ ಕಾಲೇಜು ಶಿಕ್ಷಣ ಇಲಾಖೆ ದ.ಕ ಮಂಗಳೂರು ಮತ್ತು ಸರಕಾರಿ ಪದವಿ ಪೂರ್ವ ಕಾಲೇಜು ಉಪ್ಪಿನಂಗಡಿ ಇದರ ಜಂಟಿ ಆಶ್ರಯದಲ್ಲಿ ತಾಲೂಕು ಮಟ್ಟದ ಬಾಲಕ ಹಾಗೂ ಬಾಲಕಿಯರ ವಿಭಾಗದ ಮ್ಯಾಟ್ ಕಬಡ್ಡಿ ಪಂದ್ಯಾಟವು ಸೆ.17ರಂದು ಉಪ್ಪಿನಂಗಡಿಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದೆ ಎಂದು ಕಾಲೇಜು ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಅಝೀಝ್ ಬಸ್ತಿಕ್ಕಾರ್ ತಿಳಿಸಿದ್ದಾರೆ.

ಕಾಲೇಜಿನಲ್ಲಿ ನಡೆದ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, 870ರಷ್ಟು ವಿದ್ಯಾರ್ಥಿಗಳನ್ನು ಹೊಂದಿರುವ ನಮ್ಮ ಕಾಲೇಜಿನಲ್ಲಿ ಗುಣಮಟ್ಟದ ಶಿಕ್ಷಣದೊಂದಿಗೆ ಪಠ್ಯೇತರ ಚಟುವಟಿಕೆಗಳಿಗೂ ಮಹತ್ವ ನೀಡುತ್ತಿದ್ದು, ಕಾಲೇಜಿನ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಮ್ಯಾಟ್ ಕಬಡ್ಡಿ ಪಂದ್ಯಾಟವನ್ನು ಆಯೋಜಿಸ ಲಾಗಿದೆ. ಅಂದು ಬೆಳಗ್ಗೆ 9:30ಕ್ಕೆ ಪಂದ್ಯಾಟದ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಶಾಸಕ ಅಶೋಕ್ ಕುಮಾರ್ ರೈ ಅಧ್ಯಕ್ಷತೆ ವಹಿಸಲಿದ್ದಾರೆ. ಉಪ್ಪಿನಂಗಡಿ ಗ್ರಾ.ಪಂ. ಅಧ್ಯಕ್ಷೆ ಪಂದ್ಯಾಟ ಉದ್ಘಾಟಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಪುತ್ತೂರು ಸಹಾಯಕ ಕಮಿಷನರ್ ಸೈಲ್ಲಾ ವರ್ಗೀಸ್ , ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕಿ ರಾಜೇಶ್ವರಿ ಎಚ್.ಎಚ್. , ಉಪ್ಪಿನಂಗಡಿ ವೃತ್ತ ನಿರೀಕ್ಷಕ ರವಿ ಬಿ.ಎಸ್., ದ.ಕ. ಜಿಲ್ಲಾ ಕ್ರೀಡಾ ಸಂಚಾಲಕ ಪ್ರೇಮನಾಥ ಶೆಟ್ಟಿ ಗೌರವ ಉಪಸ್ಥಿತಿ ಇರಲಿದ್ದು, ಮುಖ್ಯ ಅತಿಥಿಗಳಾಗಿ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಾಲಯದ ಆಡಳಿತ ಮೊಕ್ತೇಸರ ರಾಧಾಕೃಷ್ಣ ನಾೈಕ್, ರೋಟರಿಯ ಉಪ್ಪಿನಂಗಡಿ ವಲಯದ ಸಹಾಯಕ ಗವರ್ನರ್ ಡಾ. ರಾಜಾರಾಮ್ ಕೆ.ಬಿ., ಉಪ್ಪಿನಂಗಡಿ ಗ್ರಾ.ಪಂ.ನ ಉಪಾಧ್ಯಕ್ಷೆ ವಿದ್ಯಾಲಕ್ಷ್ಮೀ ಪ್ರಭು, ಮಾಜಿ ಅಧ್ಯಕ್ಷ ಅಬ್ದುರ್ರಹ್ಮಾನ್ ಮಠ, ಸದಸ್ಯ ಯು.ಟಿ. ತೌಸೀಫ್, ಅಮೆಚೂರ್ ಕಬಡ್ಡಿ ಅಸೋಸಿಯೇಷನ್‍ನ ಜಿಲ್ಲಾ ಕಾರ್ಯಾಧ್ಯಕ್ಷ ಚಂದ್ರಹಾಸ ಶೆಟ್ಟಿ, ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಸುನೀಲ್ ಕುಮಾರ್ ದಡ್ಡು, ಉಪ್ಪಿನಂಗಡಿ ಗ್ರಾ.ಪಂ.ನ ಅಭಿವೃದ್ಧಿ ಅಧಿಕಾರಿ ವಿಲ್ಫ್ರೆಡ್ ಲಾರೆನ್ಸ್ ರೊಡ್ರಿಗಸ್, ಉಪ್ಪಿನಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಜಾನ್ ಕೆನ್ಯೂಟ್, ಉಪ್ಪಿನಂಗಡಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಪ್ರಶಾಂತ್ ಡಿಕೋಸ್ತ, ಅರಫಾ ವಿದ್ಯಾಸಂಸ್ಥೆಯ ಆಡಳಿತ ನಿರ್ದೇಶಕ ಶಫೀಕ್ ಅರಫಾ, ಜೋಸಿಸ್ ಆಯುರ್ವೇದ ಆಸ್ಪತ್ರೆಯ ಡಾ. ಸುಪ್ರೀತ್ ಲೋಬೋ, ಉದ್ಯಮಿ ಸಿದ್ದೀಕ್ ಕೆಂಪಿ, ನಿವೃತ್ತ ಯೋಧ ಸಿದ್ದೀಕ್ ಕೆಂಪಿ ಭಾಗವಹಿಸಲಿದ್ದಾರೆ. ಸಂಜೆ 5:30ಕ್ಕೆ ಸಮಾರೋಪ ಸಮಾರಂಭ ನಡೆಯಲಿದ್ದು, ಕಾಲೇಜು ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಅಝೀಝ್ ಬಸ್ತಿಕ್ಕಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ‌

ಮುಖ್ಯ ಅತಿಥಿಗಳಾಗಿ ಉಪ್ಪಿನಂಗಡಿ ಪೊಲೀಸ್ ಠಾಣಾ ಉಪನಿರೀಕ್ಷಕ ಅವಿನಾಶ್ ಎಚ್. ಗೌಡ, ಯುವ ಸಬಲೀಕರಣ ಮತ್ತು ಯುವಜನ ಕ್ರೀಡಾ ಇಲಾಖೆಯ ಮೇಲ್ವಿಚಾರಕ ಶ್ರೀಕಾಂತ್, ಉಪ್ಪಿನಂಗಡಿ ಸಮುದಾಯ ಆರೋಗ್ಯ ಕೇಂದ್ರದ ಆಡಳಿತಾಧಿಕಾರಿ ಡಾ. ಕೃಷ್ಣಾನಂದ, ಉದ್ಯಮಿ ಕಿರಣ್ ಪುಷ್ಪಗಿರಿ, ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಪ್ರವೀಣ್ ಕುಮಾರ್ ಕೆ., ಬಿಎಸ್ಸೆಸ್ಸೆಫ್‍ನ ನಿವೃತ್ತ ಡೆಪ್ಯೂಟಿ ಕಮಾಡೆಂಟ್ ಚಂದಪ್ಪ ಮೂಲ್ಯ, ನೆಲ್ಯಾಡಿ ಸಂತ ಜಾರ್ಜ್ ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಮೊಹಮ್ಮದ್ ಹಾರಿಸ್, ಉದ್ಯಮಿ ನಟೇಶ್ ಪೂಜಾರಿ, ಹಳೆ ವಿದ್ಯಾರ್ಥಿ ನೌಫಲ್, ಕಬ್ಬಡ್ಡಿ ತರಬೇತುದಾರ ಆಸೀಫ್ ತಂಬುತ್ತಡ್ಕ ಭಾಗವಹಿಸಲಿದ್ದಾರೆ. ಪಂದ್ಯಾಟದ ವೀಕ್ಷಕ ವಿವರಣೆಯನ್ನು ಕಾಲೇಜಿನ ಹಳೆವಿದ್ಯಾರ್ಥಿ ಸಂದೇಶ್ ನೀಡಲಿದ್ದಾರೆ ಎಂದು ಅವರು ತಿಳಿಸಿದರು.

ಪುತ್ತೂರು ತಾಲೂಕಿನಲ್ಲಿ ಒಟ್ಟು 11 ಪದವಿ ಪೂರ್ವ ಕಾಲೇಜುಗಳಿದ್ದು, ಈಗಾಗಲೇ 8 ಹುಡುಗರ, 4 ಹುಡುಗಿಯರ ತಂಡಗಳು ಸೇರಿದಂತೆ 12 ತಂಡಗಳು ನೋಂದಾವಣೆ ಮಾಡಿಕೊಂಡಿವೆ. ಇನ್ನಷ್ಟು ತಂಡಗಳು ಭಾಗವಹಿಸುವ ನಿರೀಕ್ಷೆಯಿದೆ. ಪಂದ್ಯಾಟಕ್ಕೆ ಬೇಕಾದ ಮ್ಯಾಟ್ ಅನ್ನು ಉಪ್ಪಿನಂಗಡಿ ಗ್ರಾ.ಪಂ. ನೀಡಿದ್ದು, ಸರ್ವರ ಸಹಕಾರದಿಂದ ಸರಕಾರಿ ಕಾಲೇಜೊಂದರಲ್ಲಿ ಈ ಕ್ರೀಡಾಕೂಟವನ್ನು ಯಶಸ್ವಿಯಾಗಿ ನಿರ್ವಹಿಲಿದ್ದೇವೆ ಎಂಬ ಭರವಸೆ ನಮಗಿದೆ ಎಂದರು.

ಪತ್ರಿಕಾಗೋಷ್ಟಿಯಲ್ಲಿ ಕಾಲೇಜಿನ ಪ್ರಾಂಶುಪಾಲ ಇಬ್ರಾಹೀಂ, ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರಾದ ಯು.ಟಿ. ತೌಸೀಫ್, ಡಾ. ರಾಜಾರಾಮ್ ಕೆ.ಬಿ., ಅನಿ ಮಿನೇಜಸ್, ನಾಗೇಶ ಪ್ರಭು, ನಝೀರ್ ಮಠ, ಆದಂ ಕೊಪ್ಪಳ, ಮಜೀದ್ ಮಠ, ಉಪನ್ಯಾಸಕರಾದ ಉಷಾ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News