ಶ್ರೀ ಗೋಕರ್ಣ ಪರ್ತಗಾಳಿ ಮಠದಿಂದ ಭಾರತೀಯ ಸೇನೆಗೆ 1.77 ಲಕ್ಷ ರೂ. ದೇಣಿಗೆ
ಮಂಗಳೂರು, ಜೂ.11: ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ ವತಿಯಿಂದ ಮಂಗಳಾರಾಮ ಕೇಂದ್ರದ ರಾಮ ನಾಮ ಜಪಕರು ಭಾರತೀಯ ಸೇನೆಯ ನಿಧಿಗಾಗಿ ಸಂಗ್ರಹಿಸಿದ್ದ ಒಟ್ಟು 1,77,777 ರೂ.ವನ್ನು ದೇಣಿಗೆಯಾಗಿ ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ಬ್ರಿಜೇಶ್ ಚೌಟ ಅವರಿಗೆ ನಗರದ ರಥಬೀದಿಯ ಶಾಖಾ ಮಠದಲ್ಲಿ ಹಸ್ತಾಂತರಿಸಿದರು.
ದೇಣಿಗೆ ಸ್ವೀಕರಿಸಿ ಮಾತನಾಡಿದ ಸಂಸದ ಚೌಟ ಅವರು ಶ್ರೀಗೋಕರ್ಣ ಪರ್ತಗಾಳಿ ಜೀವೋತ್ತಮ ಮಠ ಮತ್ತು ಮಂಗಲರಾಮ ಕೇಂದ್ರದ ರಾಮ ನಾಮ ಜಪಕರು ಸಂಗ್ರಹಿಸಿದ ಈ ದೇಣಿಗೆಯು ಅವರ ಅಪಾರ ದೇಶಭಕ್ತಿ ಮತ್ತು ಸೇವಾ ಮನೋಭಾವಕ್ಕೆ ಉತ್ತಮ ಉದಾಹರಣೆಯಾಗಿದೆ ಎಂದರು.
ಇದೇ ವೇಳೆ ಆಪರೇಷನ್ ಸಿಂದೂರ್‌ನ ಬಳಿಕ ಜಾಗತಿಕ ಮಟ್ಟದಲ್ಲಿ ಭಯೋತ್ಪಾದನೆಯ ವಿರುದ್ಧ ಭಾರತದ ನಿಲುವನ್ನು ವ್ಯಕ್ತಪಡಿಸಲು ರಚಿಸಲಾದ ಸರ್ವಪಕ್ಷಗಳ ನಿಯೋಗದ ತಂಡದಲ್ಲಿ ಸದಸ್ಯರಾಗಿ ಭಾರತವನ್ನು ಪ್ರತಿನಿಧಿಸಿದ್ದ ಸಂಸದ ಚೌಟ ಅವರನ್ನು ಮಠದ ವತಿಯಿಂದ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಅಧ್ಯಕ್ಷ ಶ್ರೀಪಾದ ಶೆಣೈ, ಉಪಾಧ್ಯಕ್ಷ ಪಾಂಡುರಂಗ ಆಚಾರ್ಯ, ಎಸ್. ಮುಕುಂದ್ ಕಾಮತ್ , ವೇ.ಮೂ. ನಾರಾಯಣಮೂರ್ತಿ, ವೆ.ಮೂ. ಕೃಷ್ಣರಾಯ ಪುರಾಣಿಕ್,ವೇ.ಮೂ. ರಾಮಕೃಷ್ಣ ಭಟ್, ಬಸ್ತಿ ಪುರುಷೋತ್ತಮ ಶೆಣೈ, ಕಾಪು ಸತೀಶ್ ಭಟ್ ,ಕೊಂಚಾಡಿ ದಿನಕರ್ ಶೆಣೈ, ಎನ್.ಎನ್ ಪಾಲ್, ಸಿಎ ನರೇಂದ್ರ ಪೈ, ಭವಾನಿ ಶಂಕರ್, ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ನಂದನ್ ಮಲ್ಯ ಮತ್ತಿತರರು ಉಪಸ್ಥಿತರಿದ್ದರು.