ಅಬ್ದುಲ್ ರಹ್ಮಾನ್ ಕೊಲೆ ಪ್ರಕರಣ: ಡಿ.19ರಂದು ಎಸ್‌ಡಿಪಿಐ ವತಿಯಿಂದ ಪ್ರತಿಭಟನೆ
Update: 2025-12-18 20:45 IST
ಮಂಗಳೂರು: ಬಂಟ್ವಾಳ ತಾಲೂಕಿನ ಕೊಳತ್ತಮಜಲುವಿನಲ್ಲಿ ಅಬ್ದುಲ್ ರಹ್ಮಾನ್‌ರ ಕೊಲೆ ಪ್ರಕರಣದ ಆರೋಪಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳುವಲ್ಲಿ ಪೊಲೀಸ್ ಇಲಾಖೆ ಮತ್ತು ರಾಜ್ಯ ಸರಕಾರದ ವೈಫಲ್ಯ ಖಂಡಿಸಿ ಎಸ್‌ಡಿಪಿಐ ದ.ಕ. ಜಿಲ್ಲಾ ಸಮಿತಿಯು ಡಿ.19ರಂದು ಸಂಜೆ 4ಕ್ಕೆ ನಗರದ ಕ್ಲಾಕ್ ಟವರ್ ಬಳಿ ಪ್ರತಿಭಟನೆ ಹಮ್ಮಿಕೊಂಡಿದೆ.
ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸರಕಾರ ಮತ್ತು ಪೊಲೀಸ್ ಇಲಾಖೆಯ ವೈಫಲ್ಯ ಹಾಗೂ ತಾರತಮ್ಯ ನೀತಿಯ ವಿರುದ್ಧ ನಡೆಯುವ ಈ ಪ್ರತಿಭಟನೆಗೆ ಜಿಲ್ಲೆಯ ಸಮಾನ ಮನಸ್ಕರು ಪಕ್ಷಭೇದ, ಜಾತಿಭೇದ ಮರೆತು ಭಾಗವಹಿಸಬೇಕು ಎಂದು ಎಸ್‌ಡಿಪಿಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಮಾಲ್ ಜೋಕಟ್ಟೆ ಮನವಿ ಮಾಡಿದ್ದಾರೆ.