ತುಳುವಿಗೆ 2ನೇ ಅಧಿಕೃತ ಭಾಷೆ ಸ್ಥಾನಮಾನ ಅಧ್ಯಯನಕ್ಕೆ ಹೊರರಾಜ್ಯಗಳಿಗೆ ಅಧಿಕಾರಿಗಳ ತಂಡ: ಸಚಿವ ತಂಗಡಗಿ
Update: 2024-02-29 18:31 IST
ಮಂಗಳೂರು: ತುಳುವಿಗೆ ರಾಜ್ಯದ ಎರಡನೇ ಅಧಿಕೃತ ಭಾಷೆಯ ಸ್ಥಾನ ನೀಡುವ ಬಗ್ಗೆ ಈಗಾಗಲೇ ಎರಡು ಭಾಷೆಗಳಿಗೆ ರಾಜ್ಯ ಭಾಷೆಯ ಸ್ಥಾನಮಾನ ನೀಡಿರುವ ಬಿಹಾರ, ಪಶ್ಚಿಮ ಬಂಗಾಳ ಮತ್ತು ಆಂಧ್ರಪ್ರದೇಶಕ್ಕೆ ಅಧಿಕಾರಿಗಳ ತಂಡವನ್ನು ಕಳುಹಿಸಿ ವರದಿ ಪಡೆಯಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ
ಅಧಿಕಾರಿಗಳು ಮೂರು ರಾಜ್ಯಗಳಿಗೆ ತೆರಳಿ ಅಲ್ಲಿ ಎರಡು ಭಾಷೆಗಳಿಗೆ ನೀಡಲಾಗಿರುವ ಅಧಿಕೃತ ಸ್ಥಾನಮಾನದ ಬಗ್ಗೆ ಮಾಹಿತಿ ಪಡೆದು ಸಲ್ಲಿಸುವ ವರದಿಯನ್ನು ಕಾನೂನು ಇಲಾಖೆಗೆ ಸಲ್ಲಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.