×
Ad

"ಕೆಯು ಡಬ್ಲ್ಯುಜೆ ಬ್ರ್ಯಾಂಡ್ ಮಂಗಳೂರು ರೋಹನ್ ಕಪ್ ಕ್ರಿಕೆಟ್ 2024'' ಜೆರ್ಸಿ ಬಿಡುಗಡೆ

Update: 2023-12-30 23:07 IST

ಮಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರ ಕರ್ತರ ಸಂಘದ ವತಿಯಿಂದ 2024ರ ಜ.5,6,7ರಂದು ಅಡ್ಯಾರ್ ಸಹ್ಯಾದ್ರಿ ಕ್ರೀಡಾಂಗಣದಲ್ಲಿ ಕ್ಯಾ.ಪ್ರಾಂಜಲ್ ಗೌರವಾರ್ಥ ನಡೆಯಲಿರುವ 'ಕೆಯು ಡಬ್ಲ್ಯುಜೆ ಬ್ರ್ಯಾಂಡ್ ಮಂಗಳೂರು ರೋಹನ್ ಕಪ್ ಕ್ರಿಕೆಟ್' ಪಂದ್ಯಾವಳಿಯ ಪ್ರಯುಕ್ತ ಜೆರ್ಸಿಯನ್ನು ನಗರದ ಓಶಿಯನ್ ಪರ್ಲ್ ಸಭಾಂಗಣದಲ್ಲಿ  ಶಾಸಕ ಭರತ್ ಶೆಟ್ಟಿ ಮತ್ತು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವ ವಿದ್ಯಾನಿಲಯದ ಸಿಂಡಿಕೇಟ್ ಸದಸ್ಯ ಡಾ.ಇಫ್ತಿಕಾರ್ ಅಲಿ ಶನಿವಾರ ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಮಂಗಳೂರು ಪ್ರವಾಸೋದ್ಯ ಮ, ಶೈಕ್ಷಣಿಕ,ಆರೋಗ್ಯ ಸೇರಿದಂತೆ ವಿವಿಧ ಕಾರಣಗಳಿಗೆ ಜನರ ಆಕರ್ಷಣೆಗೆ ಕಾರಣ ರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಮಂಗಳೂರಿಗೆ ಬರುವವರನ್ನು ಉತ್ತಮ ಆತಿಥ್ಯ ದೊಂದಿಗೆ ಉಪಚರಿಸುವುದು ನಮ್ಮ ಕರ್ತವ್ಯ. ಮಂಗ ಳೂರಿನಲ್ಲಿ ನಡೆಯುವ ಕಾರ್ಯಕ್ರಮಗಳು ಮಾದರಿಯಾಗಿ ನಡೆಯಬೇಕು ಈ ನಿಟ್ಟಿನಲ್ಲಿ ರಾಜ್ಯ ಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾವಳಿಯೂ ಮಾದರಿಯಾಗಿ ನಡೆಯಲಿ ಎಂದು ಶುಭ ಹಾರೈಸಿದರು.

ರೋಹನ್ ಕಾರ್ಪೋರೇಶನ್ ನ ನಿರ್ದೇಶಕ ಆಲಿಸ್ಟನ್ ಸಿಕ್ವೇರಾ ಮೊದಲಾದವರು ಮುಖ್ಯ ಅತಿಥಿ ಗಳಾಗಿ ಭಾಗವಹಿಸಿ ದ್ದರು. ಈ ಸಂದರ್ಭದಲ್ಲಿ ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ,ರಾಜ್ಯ ಕಾರ್ಯ ಕಾರಿ ಸಮಿತಿ ಜಗನ್ನಾಥ ಶೆಟ್ಟಿ ಬಾಳ, ನಾಮ ನಿರ್ದೇಶಿತ ಸದಸ್ಯ ಇಬ್ರಾಹಿಂ ಅಡ್ಕಸ್ಥಳ, ಜಿಲ್ಲಾ ಉಪಾಧ್ಯಕ್ಷ ಭಾಸ್ಕರ್ ರೈ ಕಟ್ಟ, ಕಾರ್ಯ ಕಾರಿ ಸಮಿತಿ ಸದಸ್ಯ ರಾಜೇಶ್ ದಡ್ಡಂಗಡಿ, ರಾಜೇಶ್ ಶೆಟ್ಟಿ, ಸಂದೇಶ್ ಜಾರ, ಅಶೋಕ್ ಶೆಟ್ಟಿ ಬಿ.ಎನ್ ಹಿರಿಯ ಪತ್ರ ಕರ್ತ ರವೀಂದ್ರ ಶೆಟ್ಟಿ , ಉಪಸ್ಥಿತರಿದ್ದರು.

ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು. ಪ್ರದಾನ ಕಾರ್ಯ ದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು. ಕೋಶಾಧಿಕಾರಿ ಪುಷ್ಪ ರಾಜ್ ಬಿ.ಎನ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News