×
Ad

ಮೇ 21: ಬ್ಯಾರಿಯಿಂದ ಇಂಗ್ಲಿಷ್‌ಗೆ ಅನುವಾದಿತ ಕೃತಿ ಬಿಡುಗಡೆ

Update: 2025-05-19 20:44 IST

ಮಂಗಳೂರು, ಮೇ 19: ಬ್ಯಾರಿ ಭಾಷೆಯಲ್ಲಿ ಬರೆಯಲ್ಪಟ್ಟ ಜಾನಪದ ಕತೆಗಳ ಇಂಗ್ಲಿಷ್ ಅನುವಾದಿತ ಕೃತಿಯು ಮೇ 21ರಂದು ಬೆಳಗ್ಗೆ 9:30ಕ್ಕೆ ನಗರದ ಸಂತ ಅಲೋಶಿಯಸ್ ಡೀಮ್ಡ್ ವಿವಿಯ ಅಡ್ಮಿನ್ ಬ್ಲಾಕ್‌ನ ಮಚಾಯಿಸ್ ಸಭಾಂಗಣದಲ್ಲಿ ಬಿಡುಗಡೆಗೊಳ್ಳಲಿದೆ.

ಬೇರೆ ಬೇರೆ ಲೇಖಕ-ಲೇಖಕಿಯರು ಬರೆದ ಈ ಕತೆಗಳನ್ನು ಪತ್ರಕರ್ತ ಹಂಝ ಮಲಾರ್ ಸಂಪಾದಿಸಿದ್ದರು. 2016ರಲ್ಲಿ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ಆಗಿನ ಅಧ್ಯಕ್ಷ ಬಿ.ಎ.ಮುಹಮ್ಮದ್ ಹನೀಫ್ ʼಚನ್ನನʼ ಎಂಬ ಹೆಸರಿನಲ್ಲಿ ಇದನ್ನು ಪ್ರಕಟಿಸಿದ್ದರು. ಸಂತ ಅಲೋಶಿಯಸ್ ಕಾಲೇಜಿನ ಇಂಗ್ಲಿಷ್ ಪ್ರಾಧ್ಯಾಪಕಿ ಡಾ.ಸಿಲ್ವಿಯಾ ರೇಗೋ ಈ ಕೃತಿಯನ್ನು The Fakir's Daughter and other Beary Folktales ಎಂಬ ಹೆಸರಿನಲ್ಲಿ ಇಂಗ್ಲಿಷ್‌ಗೆ ಅನುವಾದಿಸಿದ್ದಾರೆ.

ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಭಾಷೆ ಮತ್ತು ಸಾಂಸ್ಕ್ರತಿಕ ಅಧ್ಯಯನ ನಿಕಾಯದ ವತಿಯಿಂದ ನಡೆಯುವ ಕಾರ್ಯಕ್ರಮದಲ್ಲಿ ಸಂಶೋಧಕ ರೆ.ಡಾ.ವಿಲ್ಲಿ ಡಿಸಿಲ್ವ ಕೃತಿಯನ್ನು ಬಿಡುಗಡೆಗೊಳಿಸ ಲಿದ್ದಾರೆ. ಹಂಝ ಮಲಾರ್ ಕೃತಿಯ ಬಗ್ಗೆ ಮಾತನಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಸಂತ ಅಲೋಶಿಯಸ್ ಇನ್‌ಸ್ಟಿಟ್ಯೂಶನ್‌ನ ರೆಕ್ಟರ್ ರೆ.ಫಾ. ಮೆಲ್ವಿನ್ ಜೋಸೆಫ್ ಪಿಂಟೋ ಎಸ್.ಜೆ. ಮತ್ತು ಸಂತ ಅಲೋಶಿಯಸ್ ಡೀಮ್ಡ್ ವಿವಿಯ ಉಪ ಕುಲಪತಿ ರೆ. ಡಾ. ಪ್ರವೀಣ್ ಮಾರ್ಟಿಸ್ ಎಸ್.ಜೆ. ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News