×
Ad

ಮೇ 21ರಿಂದ 23ರವರೆಗೆ ದ.ಕ.ಜಿಲ್ಲೆಯಲ್ಲಿ ಆರೆಂಜ್ - ರೆಡ್ ಅಲರ್ಟ್: ಹವಾಮಾನ ಇಲಾಖೆ

Update: 2025-05-19 19:49 IST

ಮಂಗಳೂರು, ಮೇ 19: ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಮೇ 21 ರಿಂದ ಮೇ 23ರವರೆಗೆ ಜಿಲ್ಲೆಯಲ್ಲಿ ಆರೆಂಜ್ ಮತ್ತು ರೆಡ್‌ ಅಲರ್ಟ್ ಇರಲಿದೆ.

ಈ ಅವಧಿಯಲ್ಲಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಪ್ರಕಟನೆಯಲ್ಲಿ ತಿಳಿಸಿದೆ.

ಮುಂಜಾಗೃತಾ ಕ್ರಮದ ಬಗ್ಗೆ ಸೂಚನೆ ನೀಡಿರುವ ಪ್ರಾಧಿಕಾರವೂ, ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ, ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಾರು ಜಾಗೃತೆ ವಹಿಸಬೇಕು. ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತು ನಿರ್ವಹಣೆಯನ್ನು ಚಾಚೂ ತಪ್ಪದೆ ನಿರ್ವಹಿಸಬೇಕು. ಜಿಲ್ಲಾಡಳಿತದಿಂದ ನೇಮಕ ಮಾಡಲಾದ ಇನ್ಸಿಡೆಂಟ್ ಕಮಾಂಡರ್‌ಗಳು ಜಾಗೃತ ರಾಗಿದ್ದು, ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸುವುದು ಮತ್ತು ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು. ಮೀನುಗಾರರು ಸಮುದ್ರಕ್ಕೆ ತೆರಳದಂತೆ ಹಾಗೂ ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನುಗಾರಿಕಾ ದೋಣಿಗಳು ಕೂಡಲೇ ದಡ ಸೇರುವಂತೆ ಹಾಗೂ ಪ್ರವಾಸಿಗರು, ಸಾರ್ವಜನಿಕರು ಸಮುದ್ರ ತೀರಕ್ಕೆ ತೆರಳದಂತೆ ಸೂಚಿಸಲಾಗಿದೆ. ಪ್ರತಿ ತಾಲೂಕುಗಳಲ್ಲಿ ಕಾಳಜಿ ಕೇಂದ್ರ ತೆರೆದು ಸನ್ನದ್ಧ ಸ್ಥಿತಿಯಲ್ಲಿರಲು ನಿರ್ದೇಶನ ನೀಡಲಾಗಿದೆ.

ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿ ಯಾವುದೇ ಸಮಸ್ಯೆಗಳಿಗೆ ಉಚಿತ ಸಹಾಯವಾಣಿ 1077/0824- 2442590ಗೆ ಸಂಪರ್ಕಿಸಬಹುದು.

ಮಂಗಳೂರು ಮನಪಾ- 0824- 2220306/2220319

ಮಂಗಳೂರು ತಾಲೂಕು- 0824- 2220587

ಉಳ್ಳಾಲ- 0824- 22204424

ಬಂಟ್ವಾಳ- 7337669102

ಪುತ್ತೂರು- 08251-230349

ಬೆಳ್ತಂಗಡಿ- 08257-231231

ಮೂಡಬಿದಿರೆ- 08258-238100

ಕಡಬ- 08251-260435

ಮುಲ್ಕಿ- 0824- 22944496

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News