ತೊಕ್ಕೊಟ್ಟು: ಅ.24ರಿಂದ ಬೆಂಚ್ ಪ್ರೆಸ್ ಚಾಂಪಿಯನ್ ಶಿಪ್- 2025
ಉಳ್ಳಾಲ: ಶ್ರೀ ಶಕ್ತಿ ಭಾರತ್ ವ್ಯಾಯಾಮ ಶಾಲೆ ಉಳ್ಳಾಲ ಬೈಲ್ ಇದರ ಆಶ್ರಯದಲ್ಲಿ ಕರ್ನಾಟಕ ಪವರ್ ಲಿಫ್ಟಿಂಗ್ ಅಸೋಸಿಯೇಶನ್ ಮಂಗಳೂರು, ದ.ಕ.ಪವರ್ ಲಿಫ್ಟಿಂಗ್ ಅಸೋಸಿಯೇಶನ್ ಮಂಗಳೂರು ಇದರ ಸಹಯೋಗ ದೊಂದಿಗೆ ಕರ್ನಾಟಕ ರಾಜ್ಯ ಸಬ್ ಜೂನಿಯರ್, ಜ್ಯೂನಿಯರ್, ಸೀನಿಯರ್, ಮಾಸ್ಟರ್ಸ್ , ಪುರುಷರ ಹಾಗೂ ಮಹಿಳೆಯರ ಬೆಂಚ್ ಪ್ರೆಸ್ ಚಾಂಪಿಯನ್ ಶಿಪ್ -2025 ಕಾರ್ಯಕ್ರಮವು ಅ. 24,25,26 ರಂದು ತೊಕ್ಕೊಟ್ಟು ಅಂಬಿಕಾ ರೋಡ್ ಬಳಿ ಇರುವ ಗಟ್ಟಿ ಸಮಾಜ ಭವನದಲ್ಲಿ ನಡೆಯಲಿದೆ ಎಂದು ರಾಜ್ಯ ಬೆಂಚ್ ಪ್ರೆಸ್ ಚಾಂಪಿಯನ್ ಶಿಪ್ ಅಧ್ಯಕ್ಷ ಜಿತೇಂದ್ರ ಶೆಟ್ಟಿ ತಲಪಾಡಿ ಗುತ್ತು ತೊಕ್ಕೊಟ್ಟು ಪ್ರೆಸ್ ಕ್ಲಬ್ ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಅ.24 ರಂದು ಬೆಳಿಗ್ಗೆ 9.30 ಕ್ಕೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಈ ಸ್ಫರ್ಧಾ ಕೂಟವನ್ನು ಉದ್ಘಾಟಿಸಲಿದ್ದಾರೆ. ಬೆಂಚ್ ಪ್ರೆಸ್ ಚಾಂಪಿಯನ್ ಶಿಪ್ ಗೌರವ ಅಧ್ಯಕ್ಷ ಚಂದ್ರಹಾಸ್ ಉಳ್ಳಾಲ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದರು.
ಅ.26 ರಂದು ಸಂಜೆ ಐದು ಗಂಟೆಗೆ ಕಾರ್ಯಕ್ರಮದ ಸಮಾರೋಪ , ಅಭಿನಂದನಾ, ಮತ್ತು ಪ್ರಶಸ್ತಿ ವಿತರಣಾ ಕಾರ್ಯಕ್ರಮ ನಡೆಯಲಿದ್ದು, ಸ್ಪೀಕರ್ ಯುಟಿ ಖಾದರ್ ಬಹುಮಾನ ವಿತರಣೆ ಮಾಡಲಿದ್ದಾರೆ . ಹಲವು ಗಣ್ಯರು ಭಾಗವಹಿಸಲಿ ದ್ದಾರೆ ಎಂದು ಹೇಳಿದರು.
ಸುದ್ದಿ ಗೋಷ್ಠಿ ಯಲ್ಲಿ ಬೆಂಚ್ ಪ್ರೆಸ್ ಚಾಂಪಿಯನ್ ಶಿಪ್ ಗೌರವ ಅಧ್ಯಕ್ಷ ಚಂದ್ರಹಾಸ್ ಉಳ್ಳಾಲ, ಕೋಶಾಧಿಕಾರಿ ಜಯರಾಮ್, ಎಮ್, ಉಪಾಧ್ಯಕ್ಷ ವಿನೋದ್ ದುಬಯಿ,ಸುದೇಶ್ ಮರೋಳಿ, ಪ್ರಧಾನ ಕಾರ್ಯದರ್ಶಿ ಜಗದೀಶ್ ಸುಲಯ, ಪ್ರಧಾನ ಸಂಚಾಲಕ ಹೇಮಚಂದ್ರ ಬಬ್ಬುಕಟ್ಟೆ, ಜಿಲ್ಲಾ ಪವರ್ ಲಿಫ್ಟಿಂಗ್ ಅಸೋಸಿಯೇಶನ್ ಅಧ್ಯಕ್ಷ ಉಮೇಶ್ ಗಟ್ಟಿ, ಕಾರ್ಯದರ್ಶಿ ಮಧುಚಂದ್ರ ಶ್ರೀ ಶಕ್ತಿ ಭಾರತ್ ವ್ಯಾಯಾಮ ಶಾಲೆ ಅಧ್ಯಕ್ಷ ಹರೀಶ್ ಬೈಲ್, ದಾಮೋದರ ಪಿಲಾರ್ ಉಪಸ್ಥಿತರಿದ್ದರು.