ಮೇ 26ರಿಂದ ಎಸೆಸ್ಸೆಲ್ಸಿ ಪರೀಕ್ಷೆ-2 ಆರಂಭ
ಮಂಗಳೂರು: ಎಸೆಸ್ಸೆಲ್ಸಿ ಪರೀಕ್ಷೆ-2 ಮೇ 26ರಿಂದ ಜೂನ್ 2ರವೆರೆಗೆ ನಡೆಯಲಿದೆ. ಈ ವೇಳಾಪಟ್ಟಿ ಯನ್ನು ಮಂಡಳಿಯ ಜಾಲತಾಣ www.kseab.karnataka.gov.in ದಲ್ಲಿ ಪ್ರಕಟಿಸಲಾಗಿದೆ.
ಮೇ 26 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 1:15ರವರೆಗೆ ಪ್ರಥಮ ಭಾಷೆ ಕನ್ನಡ, ತೆಲುಗು, ಹಿಂದಿ, ಮರಾಠಿ, ತುಳು, ಉರ್ದು ಇಂಗ್ಲಿಷ್, ಇಂಗ್ಲಿಷ್, ಸಂಸ್ಕೃತ ಪರೀಕ್ಷೆ ನಡೆಯಲಿದೆ.
ಮೇ 27ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 1:15ರವರೆಗೆ ಕೋರ್ ಸಬ್ಜೆಕ್ಟ್ ಗಣಿತ, ಸಮಾಜಶಾಸ್ತ್ರ ಪರೀಕ್ಷೆ ನಡೆಯಲಿದೆ. ಮೇ 28ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 1ಗಂಟೆಯವರೆಗೆ ದ್ವಿತೀಯ ಭಾಷೆ ಇಂಗ್ಲಿಷ್, ಕನ್ನಡ ಪರೀಕ್ಷೆ ನಡೆಯಲಿದೆ. ಮೇ 29ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 1:15ರವರೆಗೆ ಕೋರ್ ಸಬ್ಜೆಕ್ಟ್ ಸಮಾಜ ವಿಜ್ಞಾನ ನಡೆಯಲಿದೆ.
ಮೇ 30ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ತೃತೀಯ ಭಾಷೆ ಹಿಂದಿ, ಕನ್ನಡ, ಇಂಗ್ಲಿಷ್, ಅರೆಬಿಕ್, ಉರ್ದು, ಸಂಸ್ಕೃತ, ಕೊಂಕಣಿ, ತುಳು ಪರೀಕ್ಷೆ ನಡೆಯಲಿದೆ. ಬೆಳಗ್ಗೆ 10ರಿಂದ ಮಧ್ಯಾಹ್ನ 12:15ರವರೆಗೆ ಮಾಹಿತಿ ತಂತ್ರಜ್ಞಾನ, ರಿಟೇಲ್, ಆಟೊಮೊಬೈಲ್, ಬ್ಯೂಟಿ ಆ್ಯಂಡ್ ವೆಲ್‌ನೆಸ್, ಅಪರೆಲ್ ಮೇಡ್ ಅಪ್ಸ್ ಆ್ಯಂಡ್ ಹೋಂ ಫರ್ನಿಶಿಂಗ್, ಇಲೆಕ್ಟ್ರಾನಿಕ್ಸ್ ಆ್ಯಂಡ್ ಹಾರ್ಡ್‌ವೇರ್ ಪರೀಕ್ಷೆ ನಡೆಯಲಿದೆ.
ಮೇ 31ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 1:15ರವರೆಗೆ ರಾಜ್ಯಶಾಸ್ತ್ರ ಪರೀಕ್ಷೆ ನಡೆಯಲಿದೆ. ಮಧ್ಯಾಹ್ನ 2ರಿಂದ ಸಂಜೆ 5:15ರವರೆಗೆ ಹಿಂದೂಸ್ಥಾನಿ ಸಂಗೀತ, ಕರ್ನಾಟಕ ಸಂಗೀತ ಪರೀಕ್ಷೆಗಳು ನಡೆಯಲಿದೆ.
ಜೂ.2ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 1:15ರವರೆಗೆ ಎಲಿಮೆಂಟ್ಸ್ ಆಫ್ ಇಲೆಕ್ಟ್ರಿಕಲ್ ಇಂಜಿನಿಯ ರಿಂಗ್, ಎಲಿಮೆಂಟ್ಸ್ ಆಫ್ ಮೆಕ್ಯಾನಿಕಲ್ ಇಂಜಿನಿಯರಿಂಗ್, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್, ಪ್ರೋಗ್ರಾಮಿಂಗ್ ಇನ್ ಮತ್ತು ಅರ್ಥಶಾಸ್ತ್ರ ಪರೀಕ್ಷೆ ನಡೆಯಲಿದೆ.
*ಸೂಚನೆಗಳು: ಜೂ.3ರಂದು ಜೆ.ಟಿ.ಎಸ್. (56, 57, 58 59 ವಿಷಯಗಳು) ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಹಾಗೂ ಮೌಖಿಕ ಪರೀಕ್ಷೆಗಳನ್ನು ಆಯಾ ಶಾಲೆಗಳಲ್ಲಿ ನಡೆಸಲಾಗುತ್ತದೆ. ವಿಷಯ ಸಂಕೇತ 15 ಮತ್ತು 60ರ ವಿಷಯಗಳು ಆದರ್ಶ ವಿದ್ಯಾಲಯಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯವಾಗುತ್ತವೆ. ಹಿಂದೂಸ್ಥಾನಿ ಸಂಗೀತ ಮತ್ತು ಕರ್ನಾಟಕ ಸಂಗೀತ ವಿಷಯದ ಪರೀಕ್ಷೆಯನ್ನು ಮಧ್ಯಾಹ್ನ 2ರಿಂದ ಸಂಜೆ 5.15ರವರೆಗೆ ನಿಗದಿಪಡಿಸಿದೆ. ಈ ವಿಷಯಗಳ ತಾತ್ವಿಕ ಪರೀಕ್ಷೆಯನ್ನು ಮಧ್ಯಾಹ್ನ 2ರಿಂದ ಅಪರಾಹ್ನ 3:45ರವರೆಗೆ ಮತ್ತು ಪ್ರಾಯೋಗಿಕ ಪರೀಕ್ಷೆಯನ್ನು ಮಧ್ಯಾಹ್ನ 3:45ರಿಂದ ಸಂಜೆ 5:15ರವರೆಗೆ ನಡೆಸಲಾಗುತ್ತದೆ.
ಭಿನ್ನ ಸಾಮರ್ಥ್ಯವುಳ್ಳ ವಿದ್ಯಾರ್ಥಿಗಳು ಮೂರು ಗಂಟೆಯ ಪ್ರಶ್ನೆಪತ್ರಿಕೆಗೆ ಉತ್ತರಿಸಲು ಹೆಚ್ಚುವರಿಯಾಗಿ 60 ನಿಮಿಷಗಳು, ಎರಡೂವರೆ ಗಂಟೆಯ ಪ್ರಶ್ನೆಪತ್ರಿಕೆಗೆ 50 ನಿಮಿಷಗಳು, ಎರಡು ಗಂಟೆಯ ಪ್ರಶ್ನೆಪತ್ರಿಕೆಗೆ 40 ನಿಮಿಷಗಳು, ಒಂದೂವರೆ ಗಂಟೆಯ ಪ್ರಶ್ನೆಪತ್ರಿಕೆಗೆ 30 ನಿಮಿಷಗಳನ್ನು ನೀಡಲಾಗುತ್ತದೆ.
*ಪ್ರಥಮ ಭಾಷಾ ವಿಷಯಗಳು, ಕೋರ್ ವಿಷಯಗಳು ಮತ್ತು ಜೆ.ಟಿ.ಎಸ್. ವಿಷಯಗಳಿಗೆ ಬೆಳಗ್ಗೆ 10ರಿಂದ ಮಧ್ಯಾಹ್ನ 1:15 ರವರೆಗೆ ಮತ್ತು ದ್ವಿತೀಯ ಭಾಷಾ ವಿಷಯಗಳು ಹಾಗೂ ತೃತೀಯ ಭಾಷಾ ವಿಷಯ ಗಳಿಗೆ ಬೆಳಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ಅವಧಿ ನಿಗದಿಪಡಿಸಲಾಗಿದೆ.
*ಪ್ರಥಮ ಭಾಷಾ ವಿಷಯಗಳು, ಕೋರ್ ವಿಷಯಗಳು ಮತ್ತು ಜೆ.ಟಿ.ಎಸ್. ವಿಷಯಗಳ ಪರೀಕ್ಷೆ ಬರೆ ಯಲು 3 ಗಂಟೆ ಮತ್ತು ಪ್ರಶ್ನೆ ಪತ್ರಿಕೆ ಓದಲು 15 ನಿಮಿಷ ಹಾಗೂ ದ್ವಿತೀಯ ಮತ್ತು ತೃತೀಯ ಭಾಷಾ ವಿಷಯಗಳಿಗೆ ಪರೀಕ್ಷೆ ಬರೆಯಲು 2 ಗಂಟೆ 45 ನಿಮಿಷ ಹಾಗೂ ಪ್ರಶ್ನೆಪತ್ರಿಕೆ ಓದಲು 15 ನಿಮಿಷ ನಿಗದಿಪಡಿಸಲಾಗಿದೆ.
*ಎನ್.ಎಸ್.ಕ್ಯೂ.ಎಫ್ ವಿಷಯಗಳ ಪರೀಕ್ಷೆ ಬೆಳಗ್ಗೆ 10ರಿಂದ ಮಧ್ಯಾಹ್ನ 12:15ರವರೆಗೆ ನಡೆಯಲಿದೆ. ಎನ್.ಎಸ್.ಕ್ಯೂ.ಎಫ್ ಪರೀಕ್ಷಾ ವಿಷಯಗಳ ಪರೀಕ್ಷೆ ಬರೆಯಲು 2 ಗಂಟೆ ಹಾಗೂ ಪ್ರಶ್ನೆಪತ್ರಿಕೆ ಓದಲು 15 ನಿಮಿಷ ನಿಗದಿಪಡಿಸಲಾಗಿದೆ.
*ಭಿನ್ನ ಸಾಮರ್ಥ್ಯವುಳ್ಳ ಅಭ್ಯರ್ಥಿಗಳು ಸಮಾಜಶಾಸ್ತ್ರ- 95, ಅರ್ಥಶಾಸ್ತ್ರ- 96, ರಾಜ್ಯಶಾಸ್ತ್ರ -97, ಹಿಂದೂಸ್ಥಾನಿ ಸಂಗೀತ-28 ಹಾಗೂ ಕರ್ನಾಟಕ ಸಂಗೀತ- 29 ಪರ್ಯಾಯ ವಿಷಯಗಳು ಮತ್ತು ವಿಷಯ ಸಂಕೇತಗಳಲ್ಲಿ ಉತ್ತರಿಸಲಿದ್ದಾರೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಅಧ್ಯಕ್ಷರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ದ.ಕ. ಜಿಲ್ಲೆಯಲ್ಲಿ 3,284 ವಿದ್ಯಾರ್ಥಿಗಳು
ಮೇ 26ರಿಂದ ಜೂನ್ 2ರವರೆಗೆ ನಡೆಯಲಿರುವ ಎಸೆಸ್ಸೆಲ್ಸಿ ಪರೀಕ್ಷೆ -2ಗೆ ಜಿಲ್ಲೆಯಲ್ಲಿ 2,998 ವಿದ್ಯಾರ್ಥಿ ಗಳು ಹೆಸರು ನೋಂದಾಯಿಸಿದ್ದಾರೆ. 286 ವಿದ್ಯಾರ್ಥಿಗಳು ಸುಧಾರಣೆಗಾಗಿ ಪರೀಕ್ಷೆಗೆ ಹೆಸರು ನೋಂದಾಯಿಸಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.