ಮೇ 3: ರಾಜ್ಯ ಗೃಹ ಸಚಿವರು ಮಂಗಳೂರಿಗೆ ಭೇಟಿ
Update: 2025-05-02 23:15 IST
ಮಂಗಳೂರು, ಮೇ 2: ದ.ಕ.ಜಿಲ್ಲೆಯಲ್ಲಿ ಅಶಾಂತಿಯ ವಾತಾವರಣ ಸೃಷ್ಟಿಯಾದ ಹಿನ್ನೆಲೆಯಲ್ಲಿ ಪರಿಸ್ಥಿತಿಯ ಅವಲೋಕನ ಮತ್ತು ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸುವ ಸಲುವಾಗಿ ಮೇ 3ರಂದು ಬೆಳಗ್ಗೆ ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಂಗಳೂರಿಗೆ ಆಗಮಿಸಲಿದ್ದಾರೆ.
ಪೂ.11ಕ್ಕೆ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ. ಸಂಜೆ 3:25ಕ್ಕೆ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.