ಕೋಮು ಸೌಹಾರ್ದತೆಗೆ ಧಕ್ಕೆ ತರುವ ಭಾಷಣ| ಕರಾವಳಿಯಲ್ಲಿ 3 ವರ್ಷಗಳಲ್ಲಿ 16 ಪ್ರಕರಣ ದಾಖಲು
ಮಂಗಳೂರು, ಮಾ.6: ಕೋಮು ಸೌಹಾರ್ದತೆಗೆ ಧಕ್ಕೆ ಉಂಟು ಮಾಡುವ ಭಾಷಣಗಳನ್ನು ಮಾಡುವ ವ್ಯಕ್ತಿಗಳ ವಿರುದ್ಧ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಮೂರು ವರ್ಷಗಳಲ್ಲಿ 16 ಪ್ರಕರಣಗಳು ದಾಖಲಾಗಿವೆ.
2023ರಲ್ಲಿ ದಕ್ಷಿಣ ಕನ್ನಡದಲ್ಲಿ 1, ಉತ್ತರ ಕನ್ನಡದಲ್ಲಿ 5 ಮತ್ತು ಉಡುಪಿಯಲ್ಲಿ 5 ಪ್ರಕರಣಗಳು, 2024ರಲ್ಲಿ ದ.ಕ. ಮತ್ತು ಉಡುಪಿಯಲ್ಲಿ ಯಾವುದೇ ಪ್ರಕರಣ ಇಲ್ಲ. ಉತ್ತರ ಕನ್ನಡದಲ್ಲಿ 4 ಪ್ರಕರಣಗಳು ದಾಖಲಾಗಿವೆ, 2025ರಲ್ಲಿ ಉಡುಪಿಯಲ್ಲಿ 1 ಪ್ರಕರಣ ದಾಖಲಾಗಿದೆ. ಮೂರು ವರ್ಷಗಳಲ್ಲಿ ದ.ಕ.ದಲ್ಲಿ 1, ಉ.ಕ. 9 ಮತ್ತು ಉಡುಪಿಯಲ್ಲಿ 6 ಪ್ರಕರಣಗಳು ದಾಖಲಾಗಿವೆ.
ಕೋಮು ಸೌಹಾರ್ದತೆಗೆ ಧಕ್ಕೆ ತರುವ ವ್ಯಕ್ತಿಗಳ ಮೇಲೆ 3 ವರ್ಷಗಳಲ್ಲಿ 2 ಜಿಲ್ಲೆಗಳಲ್ಲಿ 24 ಪ್ರಕರಣಗಳು ದಾಖಲಾಗಿವೆ. ಆದರೆ ದ.ಕ.ದಲ್ಲಿ ಯಾವುದೇ ಪ್ರಕರಣಗಳು ದಾಖಲಾಗಿಲ್ಲ. ಉತ್ತರ ಕನ್ನಡ 7 ಮತ್ತು ಉಡುಪಿಯಲ್ಲಿ 17 ಪ್ರಕರಣಗಳು ದಾಖಲಾಗಿವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ವಿಧಾನ ಪರಿಷತ್ ಸದಸ್ಯ ಐವನ್ ಡಿ ಸೋಜ ಅವರ ಪ್ರಶ್ನೆಗೆ ವಿಧಾನ ಪರಿಷತ್‌ನಲ್ಲಿ ಗುರುವಾರ ಉತ್ತರ ಒದಗಿಸಿದ್ದಾರೆ.