×
Ad

ನೀಲೇಶ್ವರ ಸುಡುಮದ್ದು ದುರಂತ: ಮಂಗಳೂರಿನಲ್ಲಿ 30 ಮಂದಿಗೆ ಚಿಕಿತ್ಸೆ

Update: 2024-10-30 20:33 IST

ಮಂಗಳೂರು, ಅ.30: ನೀಲೇಶ್ವರದ ದೈವಸ್ಥಾನದಲ್ಲಿ ಕಳಿಯಾಟ ಮಹೋತ್ಸವ ವೇಳೆ ಅ.28ರಂದು ರಾತ್ರಿ ಸಂಭವಿಸಿದ ಸುಡುಮದ್ದು ದುರಂತದಲ್ಲಿ ಗಾಯಗೊಂಡವರ ಪೈಕಿ ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವ ಪೈಕಿ ಮೂವರ ಸ್ಥಿತಿ ಗಂಭೀರವಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟಂಬ ಕಲ್ಯಾಣಾಧಿಕಾರಿ ಡಾ. ತಿಮ್ಮಯ್ಯ ಮಾಹಿತಿ ನೀಡಿದ್ದಾರೆ.

ನಗರದ ಆಸ್ಪತ್ರೆಯಲ್ಲಿ 26 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ 7 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ. ಮೂವರು ಸಾಮಾನ್ಯ ಗಾಯಗಳೊಂದಿಗೆ ದೇರಳಕಟ್ಟೆ ಹಾಗೂ ಒಬ್ಬರು ಕಂಕನಾಡಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರೊಂದಿಗೆ ಸಮಾಲೋಚನೆ ನಡೆಸಿದ್ದೇನೆ ಎಂದು ಡಾ. ತಿಮ್ಮಯ್ಯ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News