×
Ad

ಪುತ್ತೂರು: ಜೂ.30ರಂದು ಯುವನಿಧಿ ಅರ್ಜಿಗಳ ವಿಲೇವಾರಿ ಶಿಬಿರ

Update: 2025-06-25 20:11 IST

ಮಂಗಳೂರು, ಜೂ.25: ಪುತ್ತೂರು ತಾಲೂಕು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಉಮಾನಾಥ ಶೆಟ್ಟಿ ಅಧ್ಯಕ್ಷತೆಯಲ್ಲಿ ಜೂನ್ 30 ರಂದು ಬೆಳಗ್ಗೆ 10 ರಿಂದ ಅಪರಾಹ್ನ ಗಂಟೆ 2 ರವರೆಗೆ ಯುವನಿಧಿ ನೋಂದಾವಣೆ ಬಾಕಿ ಇರುವ ಮತ್ತು ತಿರಸ್ಕೃತ ಅರ್ಜಿಗಳ ವಿಲೇವಾರಿ ಶಿಬಿರವನ್ನು ಪುತ್ತೂರು ತಾಲೂಕು ಪಂಚಾಯತ್ ಕಟ್ಟಡದಲ್ಲಿರುವ ಪುತ್ತೂರು ತಾಲೂಕು ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿಯ ಕಚೇರಿಯಲ್ಲಿ ಆಯೋಜಿಸಲಾಗಿದೆ.

ಶಿಬಿರದಲ್ಲಿ ಯುವನಿಧಿ ಯೋಜನೆಯಡಿ 2023 ಹಾಗೂ 2024ನೇ ಸಾಲಿನಲ್ಲಿ ಯಾವುದೇ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್ ಪದವಿ ಉತ್ತೀರ್ಣರಾದ ಪುತ್ತೂರು ತಾಲೂಕು ವ್ಯಾಪ್ತಿಯ ಅರ್ಹ ಅಭ್ಯರ್ಥಿಗಳು ತಮ್ಮ ಆಧಾರ್ ಪ್ರತಿ, ಅಂಕಪಟ್ಟಿಗಳ ಪ್ರತಿಗಳು, ಆಧಾರ್ ಲಿಂಕ್ ಆಗಿರುವ ಮೊಬೈಲ್‌ನೊಂದಿಗೆ ಶಿಬಿರದಲ್ಲಿ ಭಾಗವಹಿಸಿ ಅರ್ಜಿ ಸಲ್ಲಿಸಬಹುದು.

ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಮಾನದಂಡಗಳು: ಅಭ್ಯರ್ಥಿಯು ಕರ್ನಾಟಕದಲ್ಲಿ ವಾಸಿಸುವ ಕನ್ನಡಿಗ ಅಭ್ಯರ್ಥಿಯಾಗಿರಬೇಕು. ಕರ್ನಾಟಕದಲ್ಲಿ ಕನಿಷ್ಠ 6 ವರ್ಷಗಳವರೆಗೆ ಪದವಿ/ಡಿಪ್ಲೋಮಾ/ಸ್ನಾತಕೋತ್ತರ ಪದವಿವರೆಗೆ ಅಧ್ಯಯನ ಮಾಡಿದವರಾಗಿರಬೇಕು. 2023 ಹಾಗೂ 2024ರ ವರ್ಷದಲ್ಲಿ ತೇರ್ಗಡೆಯಾಗಿದ್ದು, ಉತ್ತೀರ್ಣರಾಗಿ 180 ದಿನಗಳು ಕಳೆದರೂ ಉದ್ಯೋಗ ಲಭಿಸದವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ದಿನದಿಂದ ಉದ್ಯೋಗ ಸಿಗುವವರೆಗೆ ಮಾತ್ರ ಅಥವಾ 2 ವರ್ಷ ಗರಿಷ್ಠ ಅವಧಿಯವರೆಗೆ ಮಾತ್ರ ಈ ಭತ್ಯೆ ಸಿಗಲಿದೆ.

2023 ಅಥವಾ 2024ರಲ್ಲಿ ಪದವಿ,ಸ್ನಾತಕೋತ್ತರ ಪದವಿ,ಡಿಪ್ಲೋಮಾ ,ಇಂಜಿನಿಯರಿಂಗ್ ಉತ್ತೀರ್ಣ ರಾಗಿ 6 ತಿಂಗಳಾದರೂ ಉದ್ಯೋಗ ಲಭಿಸದೇ ಇರುವ ಅಭ್ಯರ್ಥಿಗಳು ಅಥವಾ ಸ್ವಯಂ ಉದ್ಯೋಗ ಹೊಂದಿಲ್ಲದವರು ಅಥವಾ ಉನ್ನತ ವಿದ್ಯಾಭ್ಯಾಸ ಮುಂದುವರಿಸದೇ ಇರುವವರು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ನೇರ ನಗದು ವರ್ಗಾವಣೆಗಳನ್ನು (ಡಿಬಿಟಿ) ಸ್ವೀಕರಿಸಲು ಮೊಬೈಲ್ ಸಂಖ್ಯೆಗೆ ಲಿಂಕ್ ಆದ ಆಧಾರ್ ಸಂಖ್ಯೆಯ ಬ್ಯಾಂಕ್ ಖಾತೆಯನ್ನು ಕಡ್ಡಾಯವಾಗಿ ಹೊಂದಿರಬೇಕು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಉದ್ಯೋಗಾಧಿಕಾರಿ ಪ್ರಕಟನೆೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News