×
Ad

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ದ.ಕ. ಜಿಲ್ಲಾ ಚುನಾವಣೆ: 34 ಮಂದಿ ಅಭ್ಯರ್ಥಿಗಳು ಕಣದಲ್ಲಿ

► ಇಬ್ಬರು ಅವಿರೋಧ ಆಯ್ಕೆ

Update: 2025-10-31 19:01 IST

ಮಂಗಳೂರು, ಅ.31: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ದ.ಕ. ಜಿಲ್ಲಾ ಘಟಕದ ಚುನಾವಣೆಯು ನ.9ರಂದು ನಡೆಯಲಿದೆ. 23 ಸ್ಥಾನಗಳಿಗೆ 34 ಮಂದಿ ಅಭ್ಯರ್ಥಿಗಳು ಅಂತಿಮ ಕಣದಲ್ಲಿದ್ದಾರೆ. ಎರಡು ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದೆ.

ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಜೇಶ್ ಕೆ.ಪೂಜಾರಿ, ಕೋಶಾಧಿಕಾರಿ ಸ್ಥಾನಕ್ಕೆ ವಿಜಯ್ ಕೋಟ್ಯಾನ್ ಪಡು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಅಧ್ಯಕ್ಷ ಸ್ಥಾನಕ್ಕೆ ನೇರ ಸ್ಪರ್ಧೆ ಏರ್ಪಟ್ಟಿದ್ದು, ಪುಷ್ಪರಾಜ್ ಬಿ.ಎನ್. ಹಾಗೂ ಶ್ರವಣ್ ಕುಮಾರ್ ಕೆ. ಕಣದಲ್ಲಿದ್ದಾರೆ. ಉಪಾಧ್ಯಕ್ಷ 3 ಸ್ಥಾನಗಳಿಗೆ 5 ಮಂದಿ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಉಪಾಧ್ಯಕ್ಷತೆಗೆ ಮುಹಮ್ಮದ್ ಆರೀಫ್, ಗಂಗಾಧರ ಕಲ್ಲಪಳ್ಳಿ, ಐ.ಬಿ. ಸಂದೀಪ್ ಕುಮಾರ್, ವಿಲ್‌ಫ್ರೆಡ್ ಡಿಸೋಜ, ರಾಜೇಶ್ ಶೆಟ್ಟಿ S ರ್ಧಿಸುತ್ತಿದ್ದಾರೆ.

ಕಾರ್ಯದರ್ಶಿ 3 ಸ್ಥಾನಗಳಿಗೆ ನಾಲ್ಕು ಮಂದಿ ಅಂದರೆ ಎ. ಸಿದ್ದಿಕ್ ನೀರಾಜೆ, ರಾಜೇಶ್ ಕುಮಾರ್, ಸುರೇಶ್ ಡಿ. ಪಳ್ಳಿ, ಸತೀಶ್ ಇರಾ ಕಣದಲ್ಲಿದ್ದಾರೆ. ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯತ್ವಕ್ಕೆ ಶ್ರೀನಿವಾಸ ನಾಯಕ್ ಇಂದಾಜೆ ಮತ್ತು ಮುಹಮ್ಮದ್ ಅನ್ಸಾರ್ ಇನೋಳಿ ಸ್ಪರ್ಧಿಸುತ್ತಿದ್ದಾರೆ.

ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸದಸ್ಯರ 15 ಸ್ಥಾನಗಳಿಗೆ ಅಶೋಕ್ ಶೆಟ್ಟಿ ಬಿ.ಎನ್, ಸಂದೇಶ್ ಜಾರ, ಗಿರೀಶ್ ಅಡ್ಪಂಗಾಯ, ಪ್ರಕಾಶ್ ಸುವರ್ಣ, ಸಂದೀಪ್ ಕುಮಾರ್ ಎಂ. ಲಕ್ಷ್ಮಿನಾರಾಯಣ ರಾವ್, ಹರೀಶ್ ಮೋಟುಕಾನ, ಶಶಿಧರ ಬಂಗೇರ, ದಿವಾಕರ ಪದ್ಮುಂಜ, ಕಿರಣ್ ಯು. ಸಿರ್ಸೀಕರ್, ಅಭಿಷೇಕ್ ಎಚ್.ಎಸ್, ಜಯಶ್ರೀ, ಮಂಜುನಾಥ್ ಕೆ.ಪಿ., ಭುವನೇಶ್ವರ ಜಿ., ಸಂದೀಪ್ ವಾಗ್ಲೆ, ಪ್ರವೀಣ್ ರಾಜ್ ಕೆ.ಎಸ್, ಹರೀಶ್ ಕೆ. ಆದೂರ್, ಲೋಕೇಶ್ ಸುರತ್ಕಲ್, ಶೇಖ್ ಝೈನುದ್ದೀನ್, ಸಂದೀಪ್ ಸಾಲ್ಯಾನ್, ಆರೀಫ್ ಕಲ್ಕಟ್ಟ ಕಣದಲ್ಲಿದ್ದಾರೆ ಎಂದು ಚುನಾವಣಾಧಿಕಾರಿಯೂ ಆದ ದ.ಕ.ಜಿಲ್ಲಾ ವಾರ್ತಾಧಿಕಾರಿ ಖಾದರ್ ಷಾ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News