×
Ad

ಅಡ್ಡೂರು: ಅನಧಿಕೃತ ಮರಳುಗಣಿಗಾರಿಕೆ ಆರೋಪ; 5 ದೋಣಿ ವಶ

Update: 2023-12-22 22:30 IST

ಸಾಂದರ್ಭಿಕ ಚಿತ್ರ

ಮಂಗಳೂರು: ಅಡ್ಡೂರು ಗ್ರಾಮದ ಕೆಳಗಿನಕೆರೆ ಎಂಬಲ್ಲಿ ಅನಧಿಕೃತವಾಗಿ ಮರಳನ್ನು ಗಣಿಗಾರಿಕೆ ನಡೆಸುತ್ತಿರುವ ಮಾಹಿತಿಯ ಆಧಾರದಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು ಶುಕ್ರವಾರ ದಾಳಿ ನಡೆಸಿದ್ದಾರೆ.

ಅಕ್ರಮವಾಗಿ ಮರಳು ಗಣಿಗಾರಿಕೆಯಲ್ಲಿ ಬಳಕೆಯಾಗಿದ್ದ 5 ದೋಣಿಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಪ್ರದೇಶದಲ್ಲಿ ದಾಸ್ತಾನಿರಿಸಿದ್ದ ಮರಳನ್ನು ವಶಪಡಿಸಿಕೊಂಡಿದ್ದು, ಭೂಮಾಲಕರ ವಿರುದ್ಧ ಪ್ರಕರಣ ದಾಖಲಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News