×
Ad

ರಾಷ್ಟ್ರೀಯ ರಕ್ಷಣಾ ನಿಧಿಗೆ 5 ಕೋಟಿ ರೂ. ದೇಣಿಗೆ ನೀಡಿದ ಕ್ಯಾಂಪ್ಕೊ ಸಂಸ್ಥೆ

Update: 2025-05-10 18:50 IST

ಮಂಗಳೂರು: ಭಾರತದ ದೇಶದ ಗಡಿ ರಕ್ಷಣೆಗಾಗಿ ಹೋರಾಡುತ್ತಿರುವ ಯೋಧರಿಗೆ ನೆರವಾಗಲು ಕ್ಯಾಂಪ್ಕೊ ಸಂಸ್ಥೆಯು ರಾಷ್ಟ್ರೀಯ ರಕ್ಷಣಾ ನಿಧಿಗೆ (ಎನ್‌ಡಿಎಫ್) 5 ಕೋಟಿ ರೂ. ದೇಣಿಗೆ ನೀಡಿದೆ.

ಕ್ಯಾಂಪ್ಕೊ ಯಾವಾಗಲೂ ರಾಷ್ಟ್ರೀಯ ಹಿತ ಮತ್ತು ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿಯುವಲ್ಲಿ ಮುಂಚೂಣಿಯಲ್ಲಿರುವ ರೈತರ ಸಹಕಾರಿ ಸಂಸ್ಥೆಯಾಗಿದೆ. ಈ ಹಿಂದೆಯೂ, ನೈಸರ್ಗಿಕ ವಿಕೋಪಗಳು ಮತ್ತು ರಾಷ್ಟ್ರೀಯ ತುರ್ತು ಪರಿಸ್ಥಿತಿಗಳ ಸಮಯದಲ್ಲಿ ಪ್ರಧಾನ ಮಂತ್ರಿಗಳ ಪರಿಹಾರ ನಿಧಿಗೆ ಆರ್ಥಿಕ ಬೆಂಬಲವನ್ನು ಕ್ಯಾಂಪ್ಕೊ ನೀಡಿದೆ ಎಂದು ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ತಿಳಿಸಿದ್ದಾರೆ.

ಪೆಹಲ್ಗಾಮ್ ಭಯೋತ್ಪಾದಕರ ವಿರುದ್ಧ ಪ್ರಧಾನಿ ನರೇಂದ್ರ ಮೋದಿಯವರು ತೆಗೆದುಕೊಂಡಿರುವ ಕಠಿಣ ಕ್ರಮವನ್ನು ಸಂಪೂರ್ಣ ಬೆಂಬಲಿಸುವುದಾಗಿ ಈ ನಿರ್ಣಾಯಕ ಹಂತದಲ್ಲಿ, ನಮ್ಮ ಸಶಸ್ತ್ರ ಪಡೆಗಳು ಭಯೋತ್ಪಾದನೆ ಮತ್ತು ಬಾಹ್ಯ ಬೆದರಿಕೆಗಳ ವಿರುದ್ಧ ಧೈರ್ಯದಿಂದ ದೇಶವನ್ನು ರಕ್ಷಿಸುತ್ತಿರುವಾಗ, ಅವರೊಂದಿಗೆ ನಿಲ್ಲುವುದು ನಮ್ಮ ನೈತಿಕ ಕರ್ತವ್ಯವಾಗಿದೆ ಎಂದು ಕ್ಯಾಂಪ್ಕೊ ಅಧ್ಯಕ್ಷರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News