×
Ad

ಪರೀಕ್ಷಾ ಪೂರ್ವ ತರಬೇತಿ: ಜೂ.5ರಂದು ಅರ್ಜಿ ಸಲ್ಲಿಸಲು ಕೊನೆಯ ದಿನ

Update: 2025-06-04 18:50 IST

ಮಂಗಳೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ) ಬೆಳಗಾವಿ/ಮೈಸೂರು ಕಂದಾಯ ವಿಭಾಗಗಳ ಮಹಿಳಾ ಮತ್ತು ಪುರುಷ ಯುವ ಜನರಿಗೆ 90 ದಿನಗಳ ವಸತಿಯುತ ಸೌಭ್ಯದೊಂದಿಗೆ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಗಾಗಿ ಆನ್‌ಲೈನ್ ಮೂಲಕ ಆಹ್ವಾನಿಸಲಾದ ಅರ್ಜಿಯನ್ನು ಸಲ್ಲಿಸಲು ಜೂ.5 ಕೊನೆಯ ದಿನವಾಗಿದೆ.

ಆಸಕ್ತರು www.dom.Karnataka.gov.in ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಪದವಿಯಲ್ಲಿ ಪಡೆದ ಅಂಕಗಳ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಅಭ್ಯರ್ಥಿಗಳ ಸಾಮಾನ್ಯ ಅರ್ಹತೆ ಮತ್ತಿತರ ಮಾಹಿತಿಗಾಗಿ ಇಲಾಖೆಯ ವೆಬ್‌ಸೈಟ್ www.dom.karnataka.gov.in ಅಥವಾ ಸಹಾಯವಾಣಿ: 8277799990 ಅಥವಾ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರವನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News