×
Ad

ಮಹಾವೀರ ಕಾಲೇಜಿಗೆ 60ರ ಸಂಭ್ರಮ: ಪತ್ರಕರ್ತರಿಗೆ ಮಾಹೆ ಸಹಯೋಗದಲ್ಲಿ ಕಾರ್ಯಾಗಾರ

Update: 2025-03-12 17:55 IST

ಮೂಡುಬಿದಿರೆ: ಇಲ್ಲಿನ ಶ್ರೀ ಮಹಾವೀರ ಕಾಲೇಜು ಈ ವರ್ಷ ವಜ್ರ ಮಹೋತ್ಸವ ಆಚರಿಸುತ್ತಿರುವ ಅಂಗವಾಗಿ ಮಾ. 8ರಂದು ಮಾಹೆ ಸಹಯೋಗದಲ್ಲಿ ಕಾಲೇಜಿನ ಸಭಾಂಗಣದಲ್ಲಿ ಮೂಡುಬಿದಿರೆಯ ಪತ್ರಕರ್ತರಿಗೆ ಕಾರ್ಯಾಗಾರ ನಡೆಯಿತು.

ಮಣಿಪಾಲ ಇನ್ಫಾರ್ಮೇಶನ್ ಕಮ್ಯುನಿಕೇಷನ್ಸ್ ನಿರ್ದೇಶಕರಾದ ಡಾ. ಶುಭಾ ಎಚ್. ಎಸ್. ಕಾರ್ಯಕ್ರಮ ವನ್ನು ಉದ್ಘಾಟಿಸಿದರು. ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಕೆ. ಅಭಯಚಂದ್ರ ಜೈನ್ ಅಧ್ಯಕ್ಷತೆ ವಹಿಸಿದ್ದರು.

ಆಡಳಿತ ಮಂಡಳಿ ಉಪಾಧ್ಯಕ್ಷ ಎಸ್. ಡಿ. ಸಂಪತ್ ಸಾಮ್ರಾಜ್ಯ, ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ರಾಧಾಕೃಷ್ಣ ಶೆಟ್ಟಿ, ಪಿಯು ಕಾಲೇಜಿನ ಪ್ರಾಂಶುಪಾಲ ರಮೇಶ್ ಭಟ್, ಹಳೆ ವಿದ್ಯಾರ್ಥಿ ಸಂಜಯ್ ಭಟ್, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ. ಹರೀಶ್ ಮತ್ತಿತರರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ವಿವಿಧ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾಲೇಜಿನ ಹಳೆ ವಿದ್ಯಾರ್ಥಿಗಳಾದ ಪ್ರಸನ್ನ ಹೆಗ್ಡೆ, ಎಚ್. ಮುಹಮ್ಮದ್ ವೇಣೂರು, ಜೈಸನ್ ತಾಕೋಡೆ, ಆಶ್ರಫ್ ವಾಲ್ಪಾಡಿ, ಧನಂಜಯ ಮೂಡುಬಿದಿರೆ ಅವರನ್ನು ಕಾಲೇಜು ವತಿಯಿಂದ ಸನ್ಮಾನಿಸಲಾಯಿತು. ಪ್ರಾಂಶುಪಾಲ ಡಾ. ರಾಧಾಕೃಷ್ಣ ಶೆಟ್ಟಿ ಸ್ವಾಗತಿಸಿದರು. ಉಪನ್ಯಾಸಕಿ ರಕ್ಷಿತಾ ಸನ್ಮಾನಿತರನ್ನು ಪರಿಚಯಿಸಿದರು. ಶ್ರೇಷ್ಠ ನಿರೂಪಿಸಿದ ಕಾರ್ಯಕ್ರಮದಲ್ಲಿ ಧನಂಜಯ ಮೂಡುಬಿದಿರೆ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News