×
Ad

ದ.ಕ.ಜಿಲ್ಲೆ: 8 ಕೋವಿಡ್ ಪಾಸಿಟಿವ್ ಪ್ರಕರಣ

Update: 2023-12-28 20:46 IST

ಮಂಗಳೂರು, ಡಿ.28: ದ.ಕ. ಜಿಲ್ಲೆಯಲ್ಲಿ ಗುರುವಾರ 341 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದ್ದು, ಈ ಪೈಕಿ 8 ಮಂದಿಯಲ್ಲಿ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಅಲ್ಲದೆ 16 ಸಕ್ರಿಯ ಪ್ರಕರಣವಿದೆ.

ಪಾಸಿಟಿವ್‌ಗೊಳಗಾದ 8 ಮಂದಿಯ ಪೈಕಿ ಇಬ್ಬರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 6 ಮಂದಿ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರಲ್ಲಿ ಮೂವರು ಮಹಿಳೆಯರು ಮತ್ತು ಐವರು ಪುರುಷರಿದ್ದಾರೆ. 18ರಿಂದ 79 ವರ್ಷ ಪ್ರಾಯದವರೂ ಇದ್ದಾರೆ ಎಂದು ಆರೋಗ್ಯ ಇಲಾಖೆಯ ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News