ಮನಪಾ ಬಜೆಟ್: ಜ.8ರಂದು ಸಾರ್ವಜನಿಕ ಸಭೆ
Update: 2025-01-06 21:17 IST
ಮಂಗಳೂರು: ಮಂಗಳೂರು ಮಹಾನಗರಪಾಲಿಕೆಯ 2025-26 ನೇ ಸಾಲಿನ ಆಯವ್ಯಯ ತಯಾರಿಕೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ನಿಯಮಾನುಸಾರ ಎರಡು ಸುತ್ತಿನ ಸಾರ್ವಜನಿಕ ಸಮಾಲೋಚನೆ ನಡೆಸಬೇಕಾಗಿರುವುದರಿಂದ, ಎರಡನೇ ಸುತ್ತಿನ ಸಾರ್ವಜನಿಕ ಸಭೆಯನ್ನು ಜನವರಿ 8ರಂದು ಮಧ್ಯಾಹ್ನ 3:30 ಗಂಟೆಗೆ ಮಂಗಳೂರು ಮಹಾನಗರ ಪಾಲಿಕೆಯ ಕಚೇರಿಯ ಮಂಗಳಾ ಸಭಾಂಗಣದಲ್ಲಿ ಮಹಾಪೌರರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿದೆ.
ಆಯವ್ಯಯ ತಯಾರಿಕೆಗೆ ಸಾರ್ವಜನಿಕ ಸಲಹೆ ಮತ್ತು ಅಭಿಪ್ರಾಯಗಳನ್ನು ಸಂಗ್ರಹಿಸಲು ಈ ಸಭೆಗೆ ನೋಂದಾಯಿತ ವಸತಿ ಕ್ಷೇಮಾಭಿವೃದ್ಧಿ ಸಂಘಗಳು, ನೊಂದಾಯಿತ ಸರಕಾರೇತರ ಸಂಘ ಸಂಸ್ಥೆಗಳು, ವಾಣಿಜ್ಯ ಮತ್ತುಕೈಗಾರಿಕಾ ಸಂಘ ಸಂಸ್ಥೆಗಳು, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಅಮೂಲ್ಯವಾದ ಸಲಹೆಗಳನ್ನು ನೀಡುವಂತೆ ಮಂಗಳೂರು ಮಹಾನಗರ ಪಾಲಿಕೆ ಮುಖ್ಯ ಲೆಕ್ಕಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.