×
Ad

ಲಕ್ಷದಷ್ಟು ಸಂಖ್ಯೆಯ ಫಾಲೋವರ್ಸ್ ಹೊಂದಿದ್ದ Instagram ಪೇಜ್ ರದ್ದು

Update: 2025-05-09 22:36 IST

ಮಂಗಳೂರು: ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ರೇಕಕಾರಿ ಮತ್ತು ಪ್ರಚೋದನ ಕಾರಿಯಾಗಿ ಪೋಸ್ಟ್‌ ಮಾಡಿದ್ದ ಒಂದು ಲಕ್ಷ ಫಾಲೋವರ್ಸ್ ಹೊಂದಿದ್ದ ಇನ್‌ಸ್ಟಾಗ್ರಾಂ ಪೇಜನ್ನು ರದ್ದು ಮಾಡಿರುವ ಘಟನೆ ವರದಿಯಾಗಿದೆ.

ಸಮಾಜದ ವಿವಿಧ ಧರ್ಮ ಹಾಗೂ ವರ್ಗಗಳ ಜನರಲ್ಲಿ ದ್ವೇಷದ ಭಾವನೆ ಹುಟ್ಟು ಹಾಕಿ ಅಪರಾಧ ಕೃತ್ಯ ವೆಸಗುವಂತೆ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿ, ಒಂದು ಸಮುದಾಯವನ್ನು ಮತ್ತೊಂದು ಸಮುದಾಯದ ವಿರುದ್ಧ ದ್ವೇಷಭಾವನೆ ಹುಟ್ಟುವಂತೆ ಬ್ಯಾರಿ ರೋಯಲ್ ನವಾಬ್ ಎನ್ನುವ ಇನ್‌ಸ್ಟಾ ಗ್ರಾಂ ಫೇಜ್‌ನಲ್ಲಿ ಪೋಸ್ಟ್ ಗಳನ್ನು ಮಾಡಲಾಗುತ್ತಿತ್ತು.

ಬರ್ಕೆ ಮತ್ತು ಮುಲ್ಕಿ ಪೊಲೀಸ್ ಠಾಣೆಯಲ್ಲಿ ಒಟ್ಟು 3 ಪ್ರಕರಣಗಳು ದಾಖಲಾಗಿದ್ದು, ಈ ಪ್ರಕರಣಗಳಲ್ಲಿ ತನಿಖೆಯನ್ನು ಮಂಗಳೂರು ನಗರ ಸಿಇಎನ್ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿರುತ್ತದೆ.

ಈ ಪೇಜ್‌ನ ಬಗ್ಗೆ ಮಾಹಿತಿ ನೀಡುವಂತೆ ಸಂಬಂಧಪಟ್ಟ ಕಾನೂನು ಜಾರಿ ಸಂಸ್ಥೆ ಜತೆ ಪತ್ರ ವ್ಯವಹಾರ ನಡೆಸಲಾಗಿತ್ತು, ಅದರಂತೆ ಸಂಬಂಧಪಟ್ಟ ಸಂಸ್ಥೆ ಎಂಬ ಇನ್ ಸ್ಟಾಗ್ರಾಂ ಪೇಜ್‌ನ್ನು ಭಾರತ ದೇಶದಲ್ಲಿ ಕಾರ್ಯ ನಿರ್ವಹಿಸದಂತೆ ರದ್ದುಗೊಳಿಸಿರುವುದಾಗಿ ತಿಳಿದು ಬಂದಿದೆ.

ಸಿಇಎನ್ ಅಪರಾಧ ಪೊಲೀಸ್ ಠಾಣೆಯ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News