×
Ad

ಮಂಗಳೂರು: MIOಗೆ ರಾಜ್ಯ ಆರೋಗ್ಯ ಇಲಾಖೆಯಿಂದ ಶ್ಲಾಘನೀಯ ಪ್ರಮಾಣ ಪತ್ರ

Update: 2024-02-22 19:30 IST

ಮಂಗಳೂರು: ನಗರದ ಮಂಗಳೂರು ಇನ್‌ಸ್ಟಿಟ್ಯೂಟ್ ಆಫ್ ಆಂಕೊಲಾಜಿ (MIO), ಆಯುಷ್ಮಾನ್ ಭಾರತ್ -ಪ್ರಧಾನ ಮಂತ್ರಿ ಜನಾರೋಗ್ಯ -ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ ಯೋಜನೆ(AB-PMJAY-CM’sARK)ಯಲ್ಲಿ ಕ್ಯಾನ್ಸರ್ ರೋಗಿಗಳಿಗೆ ನೀಡಿರುವ ಚಿಕಿತ್ಸೆಗಾಗಿ ರಾಜ್ಯ ಆರೋಗ್ಯ ಇಲಾಖೆಯಿಂದ ಶ್ಲಾಘನೆಯ ಪ್ರಮಾಣಪತ್ರವನ್ನು ಪಡೆದಿದೆ.

ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಎಂಐಒ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಲಾಲ್ ಮದತ್ತಿಲ್ ಅವರಿಗೆ ಪ್ರಮಾಣ ಪತ್ರವನ್ನು ಪ್ರದಾನ ಮಾಡಿದರು.

ಎಂಐಒ ಕ್ಯಾನ್ಸರ್-ಸಂಬಂಧಿತ ಪ್ರಕರಣಗಳಿಗೆ ಆಯುಷ್ಮಾನ್ ಭಾರತ್ -ಪ್ರಧಾನ ಮಂತ್ರಿ ಆರೋಗ್ಯ ಯೋಜನೆಯಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದೆ.

ಉನ್ನತ ದರ್ಜೆಯ ಆರೈಕೆಯನ್ನು ನೀಡುವ ಒಂದು ದಶಕದ ಸುದೀರ್ಘ ದಾಖಲೆಯೊಂದಿಗೆ, ಎಂಐಒ 40 ಸಾವಿರಕ್ಕೂ ಹೆಚ್ಚು ಕ್ಯಾನ್ಸರ್ ರೋಗಿಗಳಿಗೆ ಯಶಸ್ವಿಯಾಗಿ ಚಿಕಿತ್ಸೆ ನೀಡಿದೆ. ಸಂಸ್ಥೆಯು ಅನುಭವಿ ಕ್ಯಾನ್ಸರ್ ತಜ್ಞರ ತಂಡವನ್ನು ಹೊಂದಿದೆ ಎಂದು ಕ್ಲಿನಿಕಲ್ ಮತ್ತು ಅಡ್ಮಿನಿಸ್ಟ್ರೇಷನ್ ನಿರ್ದೆಶಕ ಡಾ. ಸುರೇಶ್ ರಾವ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.




 


Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News