ಜು.1: ಅರಣ್ಯ ಸಚಿವ ಈಶ್ವರ ಖಂಡ್ರೆ ದ.ಕ.ಜಿಲ್ಲಾ ಪ್ರವಾಸ
Update: 2024-06-29 19:19 IST
ಮಂಗಳೂರು,ಜೂ.29: ರಾಜ್ಯ ಅರಣ್ಯ, ಜಿವೀಶಾಸ್ತ್ರ, ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಜು.1ರಂದು ದ.ಕ.ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಅಂದು ಬೆಳಗ್ಗೆ 10:30ಕ್ಕೆ ಬಂಟ್ವಾಳ ತಾಲೂಕಿನ ಕಾವಲಪಡೂರು ಅಲಂಪುರಿಯಲ್ಲಿರುವ ಸಾಲುಮರದ ತಿಮ್ಮಕ್ಕ ವೃಕ್ಷ ಉದ್ಯಾವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ರಾಜ್ಯಾದ್ಯಂತ ಹಮ್ಮಿಕೊಳ್ಳಲಾದ ದಶಲಕ್ಷ ಗಿಡಗಳ ನಾಟಿ ಕಾರ್ಯಕ್ರಮ, ಅಪರಾಹ್ನ 3ಕ್ಕೆ ಮಂಗಳೂರಿನ ಅರಣ್ಯ ಭವನದಲ್ಲಿ ಅರಣ್ಯ, ಪರಿಸರ ಮತ್ತು ಸಿಆರ್‌ಜೆಡ್ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುವರು ಎಂದು ಪ್ರಕಟನೆ ತಿಳಿಸಿದೆ.