×
Ad

ಡಿ.1: ದ.ಕ. ಜಿಲ್ಲಾ ಮಟ್ಟದ ಕಲೋತ್ಸವ, ಅಂಬುಲೆನ್ಸ್ ಲೋಕಾರ್ಪಣೆ

Update: 2024-11-29 23:54 IST

ಉಪ್ಪಿನಂಗಡಿ: ಎಸ್ಕೆಎಸ್ಸೆಸ್ಸೆಫ್ ಉಪ್ಪಿನಂಗಡಿ ವಲಯ ಸಮಿತಿ ಆಶ್ರಯದಲ್ಲಿ ಎಸ್ಕೆಎಸ್ಸೆಸ್ಸೆಫ್ ದ.ಕ. ಜಿಲ್ಲಾ ಈಸ್ಟ್ ಮಟ್ಟದ "ಕಲೋತ್ಸವ-2024" ಮತ್ತು ಅಂಬುಲೆನ್ಸ್ ಲೋಕಾರ್ಪಣೆ ಕಾರ್ಯಕ್ರಮ ಡಿ. 1ರಂದು ಬೆಳಗ್ಗೆ ನಡೆಯಲಿದೆ.

ದ.ಕ. ಜಿಲ್ಲಾ ಖಾಝಿ ಶೈಖುನಾ ತ್ವಾಖಾ ಅಹಮದ್ ಮುಸ್ಲಿಯಾರ್ ಅಂಬುಲೆನ್ಸ್ ಲೋಕಾರ್ಪಣೆ ಮಾಡಲಿದ್ದಾರೆ. ಕಲೋತ್ಸವ ಕಾರ್ಯಕ್ರಮದಲ್ಲಿ 700ಕ್ಕೂ ಅಧಿಕ ಸ್ಪರ್ಧಿಗಳು ಭಾಗವಹಿಸಲಿದ್ದು, 100ರಷ್ಟು ಸ್ಪರ್ಧೆಗಳು ನಡೆಯಲಿದೆ. ಕಾರ್ಯಕ್ರಮದಲ್ಲಿ ಡಿಜಿಟಲ್ ಸ್ಕೋರ್ ಬೋರ್ಡು ಸಹಿತ ಹಲವಾರು ವಿಶೇಷತೆಗಳು ಇರುವುದಾಗಿ ಸ್ವಾಗತ ಸಮಿತಿಯ ಅಧ್ಯಕ್ಷ ಇಸ್ಮಾಯಿಲ್ ತಂಙಳ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News