×
Ad

ಜೂ.1ರಿಂದ ದ.ಕ. ಜಿಲ್ಲೆಯ ಕರಾವಳಿ ತೀರದಲ್ಲಿ ಮೀನುಗಾರಿಕೆ ನಿಷೇಧ

Update: 2025-05-20 19:28 IST

ಮಂಗಳೂರು, ಮೇ 20: ದ.ಕ. ಜಿಲ್ಲೆಯ ಕರಾವಳಿ ತೀರದಲ್ಲಿ ಯಾವುದೇ ಬಲೆ ಅಥವಾ ಸಾಧನಗಳನ್ನು ಉಪಯೋಗಿಸಿ ಎಲ್ಲಾ ರೀತಿಯ ಯಾಂತ್ರೀಕೃತ ದೋಣಿಗಳ ಮೂಲಕ ಹಾಗೂ 10 ಅಶ್ವಶಕ್ತಿ ಸಾಮರ್ಥ್ಯ ಕ್ಕಿಂತ ಮೇಲ್ಪಟ್ಟ ಮೋಟಾರೀಕೃತ ದೋಣಿ ಹಾಗೂ ಸಾಂಪ್ರದಾಯಿಕ ದೋಣಿಗಳ ಮೂಲಕ ಕೈಗೊಳ್ಳುವ ಮೀನುಗಾರಿಕಾ ಚಟುವಟಿಕೆಯನ್ನು ಜೂನ್‌1ರಿಂದ ಜುಲೈ 31ರವರೆಗೆ ನಿಷೇಧಿಸಲಾಗಿದೆ.

ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿ 10 ಅಶ್ವಶಕ್ತಿಯವರೆಗಿನ ಸಾಮರ್ಥ್ಯದ ಮೋಟಾರೀಕೃತ ಇಂಜಿನ್ ಹಾಗೂ ಸಾಂಪ್ರದಾಯಿಕ/ ನಾಡದೋಣಿಗಳ ಮೂಲಕ ಮೀನುಗಾರಿಕೆ ನಡೆಸಲು ಅನುಮತಿಸಿದೆ.

ಮೀನುಗಾರಿಕೆ ನಿಷೇಧಿಸಿದ ಸರಕಾರದ ಆದೇಶವನ್ನು ಉಲ್ಲಂಘಿಸುವ ಮೀನುಗಾರಿಕಾ ದೋಣಿಗಳು ಮತ್ತು ಮೀನುಗಾರರು ಕರ್ನಾಟಕ ಕಡಲ ಮೀನುಗಾರಿಕೆ ಕಾಯ್ದೆ-1986ರಲ್ಲಿ ವಿಧಿಸಲಾಗಿರುವ ದಂಡನೆಗಳಿಗೆ ಹೊಣೆಯಾಗುವುದಲ್ಲದೆ ಒಂದು ವಷರ್ದ ಅವಧಿಗೆ ರಾಜ್ಯ ಮಾರಾಟ ಕರ ರಹಿತ ಡೀಸೆಲ್ ಪಡೆಯಲು ಅನರ್ಹರಾಗುತ್ತಾರೆ. ಮೀನುಗಾರರು ಈ ಆದೇಶವನ್ನು ಪಾಲಿಸಿ ಸಹಕರಿಸಬೇಕು ಎಂದು ಮೀನುಗಾರಿಕೆ ಜಂಟಿ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News