×
Ad

ಜ.12: ಸಲೀಂ ಅಹ್ಮದ್ ಮಂಗಳೂರು ಭೇಟಿ

Update: 2024-01-11 22:12 IST

ಮಂಗಳೂರು, ಜ.11: ರಾಜ್ಯ ವಿಧಾನ ಪರಿಷತ್ ಮುಖ್ಯ ಸಚೇತಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಜ.12ರಂದು ಮಂಗಳೂರು ಪ್ರವಾಸ ಕೈಗೊಳ್ಳಲಿದ್ದಾರೆ.

ಬೆಳಗ್ಗೆ 9:40ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಪೂರ್ವಾಹ್ನ 11ಕ್ಕೆ ಮಂಗಳೂರು ಸರ್ಕ್ಯೂಟ್ ಹೌಸ್‌ ನಲ್ಲಿ ಚುನಾಯಿತ ಪ್ರತಿನಿಧಿಗಳ ಭೇಟಿ ಮಾಡಲಿರುವರು. ಮಧ್ಯಾಹ್ನ 2:30ಕ್ಕೆ ಕಾಂಗ್ರೆಸ್ ಭವನದಲ್ಲಿ ಜ.21ರಂದು ನಡೆ ಯುವ ರಾಜ್ಯ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಂಜೆ 7:40ಕ್ಕೆ ಬೆಂಗಳೂರಿಗೆ ಮರಳಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News