×
Ad

ಮಾ.13: ಜಿಲ್ಲಾ ಮಟ್ಟದ ರಾಜ್ಯ ಸರಕಾರಿ ನೌಕರರ ಕ್ರೀಡಾಕೂಟ

Update: 2025-03-06 19:49 IST

ಮಂಗಳೂರು, ಮಾ.6: ದ.ಕ. ಜಿಲ್ಲಾಡಳಿತ, ಜಿಪಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಸಹಯೋಗದೊಂದಿಗೆ ಜಿಲ್ಲಾ ಮಟ್ಟದ ರಾಜ್ಯ ಸರಕಾರಿ ನೌಕರರ ಕ್ರೀಡಾಕೂಟವು ಮಾ.13ರಂದು ಬೆಳಗ್ಗೆ 8ಕ್ಕೆ ನಗರದ ಮಂಗಳ ಕ್ರೀಡಾಂಗಣದಲ್ಲಿ ನಡೆಯಲಿದೆ.

ಮಾ.14 ರಂದು ಬೆಳಿಗ್ಗೆ 9 ಗಂಟೆಗೆ ಸರಕಾರಿ ನೌಕರರ ಸಭಾಭವನದಲ್ಲಿ ಸಾಂಸ್ಕೃತಿಕ ಸ್ಪರ್ಧೆಗಳು ನಡೆಯಲಿದೆ. ಸಂಗೀತ, ನೃತ್ಯ, ಚೆಸ್ ಮತ್ತು ನಾಟಕ ಸ್ಪರ್ಧೆಗಳಲ್ಲಿ ಪ್ರತ್ಯೇಕವಾಗಿ ಪುರುಷರಿಗೆ ಹಾಗೂ ಮಹಿಳೆಯರಿಗೆ ಸ್ಪರ್ಧೆಗಳು ಇರುವುದಿಲ್ಲ. ಪುರುಷರು ಹಾಗೂ ಮಹಿಳೆಯರು ಒಟ್ಟಾಗಿ ಸ್ಪರ್ಧೆಯಲ್ಲಿ ಭಾಗವಹಿಸಬಹುದು.

ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸುವ ಸ್ಪರ್ಧಾಳುಗಳು ಪ್ರವೇಶ ಪತ್ರದಲ್ಲಿ ವಿವರಗಳನ್ನು ಭರ್ತಿ ಮಾಡಿ, ಮಾ.11 ರೊಳಗೆ ಕಚೇರಿಗೆ ಸಲ್ಲಿಸಬೇಕು. ಸ್ಪರ್ಧೆಗಳಲ್ಲಿ ಭಾಗವಸುವ ಸರಕಾರಿ ನೌಕರರು ಸ್ಪರ್ಧೆ ನಡೆಯುವ ದಿನಾಂಕದಂದು ಬೆಳಗ್ಗೆ 8 ಗಂಟೆಯೊಳಗೆ ಆಯಾ ಸ್ಥಳಗಳಲ್ಲಿ ವರದಿ ಮಾಡಿಕೊಳ್ಳುವಂತೆ ಹಾಗೂ ಸಂಬಂಧಪಟ್ಟ ಇಲಾಖೆಯ ಮುಖ್ಯಸ್ಥರು ಕ್ರೀಡಾಪಟುಗಳಿಗೆ ಸೂಚಿಸಿ ಕಳುಹಿಸಿಕೊಡುವಂತೆ ಯುವ ಸಬಲೀಕರಣ ಮತ್ತುಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News