ಜ.14ರಂದು ‘ಸುವರ್ಣಯುಗ’ ಕೃತಿ ಬಿಡುಗಡೆ
ಮಂಗಳೂರು: ಜನಸೇವಕ, ಬ್ಯಾಂಕಿಂಗ್ ಕ್ಷೇತ್ರದ ಮುತ್ಸದ್ದಿ ಜಯ ಸಿ. ಸುವರ್ಣ ಅವರ ಜೀವನ ಸಾಧನೆಯ ಕುರಿತು ಮುಂಬೈ ವಿಶ್ವವಿದ್ಯಾಲಯ ಕನ್ನಡ ವಿಭಾಗ ಪ್ರಕಟಿಸಿರುವ ಅನಿತಾ ಪಿ. ತಾಕೊಡೆ ಬರೆದಿರುವ ‘ಸುವರ್ಣಯುಗ’ ಕೃತಿ ಬಿಡುಗಡೆ ಸಮಾರಂಭ ಜ.14ರಂದು ಸಂಜೆ ೪ಗಂಟೆಗೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಜಯ ಸಿ. ಸುವರ್ಣ ಸಭಾಂಗಣದಲ್ಲಿ ನಡೆಯಲಿದೆ.
ಪತ್ರಿಕಾಭವನದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಿವೃತ್ತ ಪ್ರಾಧ್ಯಾಪಕ ಅಡ್ಡೆ ರವೀಂದ್ರ ಪೂಜಾರಿ ಅವರು, ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷ ಸೂರ್ಯಕಾಂತ್ ಜಯ ಸುವರ್ಣರ ನೇತೃತ್ವದಲ್ಲಿ ನಡೆಯಲಿರುವ ಕಾರ್ಯ ಕ್ರಮವನ್ನು ಸ್ಪೀಕರ್ ಯು.ಟಿ.ಖಾದರ್ ಉದ್ಘಾಟಿಸಲಿದ್ದಾರೆ. ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಅವರು ಬಿಡುಗಡೆಗೊಳಿಸಲಿದ್ದಾರೆ. ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಆರ್. ಪದ್ಮರಾಜ್ ಅಭಿನಂದನಾ ಭಾಷಣ ಮಾಡುಲಿರುವರು ಎಂದರು.
ಪ್ರಮುಖರಾದ ಕೋಟ ಶ್ರೀನಿವಾಸ ಪೂಜಾರಿ, ಉಮಾನಾಥ ಕೋಟ್ಯಾನ್, ಗುರ್ಮೆ ಸುರೇಶ್ ಶೆಟ್ಟಿ, ಸುನೀಲ್ ಕುಮಾರ್, ಯಶಪಾಲ್ ಸುವರ್ಣ, ಬಿ.ಕೆ.ಹರಿಪ್ರಸಾದ್, ಹರೀಶ್ ಕುಮಾರ್, ವಿನಯ್ ಕುಮಾರ್ ಸೊರಕೆ, ಅಭಯಚಂದ್ರ ಜೈನ್, ಬಿ.ರಮಾನಾಥ ರೈ, ಕೆ.ವಸಂತ ಬಂಗೇರ, ಗೋಪಾಲ ಪೂಜಾರಿ, ರುಕ್ಮಯ ಪೂಜಾರಿ, ಡಾ.ರಾಜಶೇಖರ್ ಕೋಟ್ಯಾನ್, ಎಚ್.ಎಸ್.ಸಾಯಿರಾಂ, ನವೀನಚಂದ್ರ ಡಿ.ಸುವರ್ಣ, ಡಾ.ಮೋಹನ್ ಆಳ್ವ, ರೋಹಿಣಿ ಸಾಲಿಯಾನ್, ರವಿ ಎಸ್.ಶೆಟ್ಟಿ, ಮಿಥುನ್ ರೈ, ಸುರೇಂದ್ರ ಎ. ಪೂಜಾರಿ, ವೇದಕುಮಾರ್, ಊರ್ಮಿಳಾ ರಮೇಶ್ ಕುಮಾರ್, ಶಶಿ ಎಂ. ಸಾಲಿಯಾನ್, ಭಾಸ್ಕರ್ ಎಂ. ಸಾಲಿಯಾನ್, ನಿತ್ಯಾನಂದ ಡಿ. ಕೋಟ್ಯಾನ್ ಮುಂತಾದ ಗಣ್ಯರು ಭಾಗವಹಿಸಲಿದ್ದಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷ ಸೂರ್ಯಕಾಂತ್ ಜಯ ಸುವರ್ಣ, ಕುದ್ರೋಳಿ ಶ್ರೀ ಗೋಕರ್ಣ ನಾಥ ಕ್ಷೇತ್ರದ ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ, ನಮ್ಮ ಕುಡ್ಲ ವಾಹಿನಿ ಆಡಳಿತ ನಿರ್ದೇಶಕ ಲೀಲಾಕ್ಷ ಕರ್ಕೇರ ಉಪಸ್ಥಿತರಿದ್ದರು.