ಜ.14: ಕೂಳೂರಿನಲ್ಲಿ ನೂತನ ಬ್ರಹ್ಮರಥಕ್ಕೆ ಸ್ವಾಗತ
Update: 2024-01-12 21:11 IST
ಮಂಗಳೂರು: ನಗರದ ಉರ್ವಸ್ಟೋರ್ ಶ್ರೀ ಮಹಾಗಣಪತಿ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ ಅಂಗವಾಗಿ ನಿರ್ಮಾಣಗೊಂಡ ನೂತನ ಬ್ರಹ್ಮರಥದ ಸ್ವಾಗತ ಕಾರ್ಯಕ್ರಮ ಹಾಗೂ ಮೆರವಣಿಗೆಯು ಜ.14ರಂದು ಸಂಜೆ 4ರಿಂದ ಕೂಳೂರು ಗೋಲ್ಡ್ ಫಿಂಚ್ ಮೈದಾನದಲ್ಲಿ ನಡೆಯಲಿದೆ.
ಗುರುಪುರ ಶ್ರೀ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ, ಶ್ರೀ ಕ್ಷೇತ್ರ ಕಟೀಲಿನ ಅನುವಂಶಿಕ ಮೊಕ್ತೇಸರ ವೇ.ಮೂ. ಅನಂತ ಪದ್ಮನಾಭ ಆಸ್ರಣ್ಣ, ಉರ್ವಾಸ್ಟೋರ್ ಶ್ರೀ ಗಣಪತಿ ದೇವಳದ ತಂತ್ರಿವರೇಣ್ಯ ವೇ.ಮೂ.ಡಾ. ಶಿವ ಪ್ರಸಾದ್ ತಂತ್ರಿ, ಶಾಸಕರಾದ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್, ಅರಣ್ಯ ಸಂರಕ್ಷಣಾಧಿಕಾರಿ ವಿ.ಕರಿಕಲನ್, ಮನಪಾ ವಿಪಕ್ಷ ನಾಯಕ ಟಿ.ಪ್ರವೀಣ್ ಚಂದ್ರ ಆಳ್ವ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಆಡಳಿತ ಮಂಡಳಿ ಅಧ್ಯಕ್ಷ ಸುರೇಂದ್ರ ರಾವ್ ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಎಂ.ಸತೀಶ್ ಆಳ್ವ ಪ್ರಕಟನೆಯಲ್ಲಿ ತಿಳಿಸಿದ್ದಾರೆ.