ನ.14: ಯುನಿವೆಫ್ ನಿಂದ ಯುವಕರು ಮತ್ತು ವಿದ್ಯಾರ್ಥಿಗಳ ಸ್ನೇಹ ಮಿಲನ
Update: 2025-11-13 15:44 IST
ಮಂಗಳೂರು, ನ.14: ಯುನಿವೆಫ್ ಕರ್ನಾಟಕ 19 ಸೆಪ್ಟಂಬರ್ 2025ರಿಂದ 2 ಜನವರಿ 2026ರವರೆಗೆ ‘ಶೋಷಿತ ಸಮಾಜ ಹಾಗೂ ಮಾನವ ಘನತೆ ಮತ್ತು ಪ್ರವಾದಿ ಮುಹಮ್ಮದ್ (ಸ)’ ಎಂಬ ವಿಷಯದಲ್ಲಿ ಹಮ್ಮಿಕೊಂಡಿರುವ 20ನೇ ವರ್ಷದ ‘ಅರಿಯಿರಿ ಮನುಕುಲದ ಪ್ರವಾದಿಯನ್ನು’ ಅಭಿಯಾನದ ಅಂಗವಾಗಿ ನ.14ರಂದು ಸಂಜೆ 6:45ಕ್ಕೆ ಫಳ್ನೀರ್ನ ಇಂದಿರಾ ಆಸ್ಪತ್ರೆ ಬಳಿ ಇರುವ ಲುಲು ಸೆಂಟರ್ ನ ಅಲ್ ವಹ್ದಾ ಸಭಾಂಗಣದಲ್ಲಿ ಯುವಕರು ಮತ್ತು ವಿದ್ಯಾರ್ಥಿಗಳ ಸ್ನೇಹ ಮಿಲನ ಕಾರ್ಯಕ್ರಮ ಹಮ್ಮಕೊಂಡಿದೆ.
ವಾರ್ತಾಭಾರತಿ ದೈನಿಕದ ಪ್ರಧಾನ ಸಂಪಾದಕ ಅಬ್ದುಸ್ಸಲಾಮ್ ಪುತ್ತಿಗೆ ವಿದ್ಯಾರ್ಥಿಗಳು ಮತ್ತು ಯುವಕರೊಂದಿಗೆ ಸಂವಾದ ನಡೆಸಲಿದ್ದಾರೆ.
ಯುನಿವೆಫ್ ಅಧ್ಯಕ್ಷ ರಫೀಉದ್ದೀನ್ ಕುದ್ರೋಳಿ ದಿಕ್ಸೂಚಿ ಭಾಷಣ ಮಾಡುವರು ಎಂದು ಯುನಿವೆಫ್ ಕ್ಯಾಂಪಸ್ ಫೋರಂ ಸಂಚಾಲಕ ಮುಹಮ್ಮದ್ ಸೈಫುದ್ದೀನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.