ಕಡಬ: 14 ವರ್ಷದ ಬಾಲಕ ಆತ್ಮಹತ್ಯೆ
Update: 2025-11-06 22:42 IST
ಕಡಬ: ಬಾಲಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ರಾತ್ರಿ ಠಾಣಾ ವ್ಯಾಪ್ತಿಯ ಕಲ್ಲುಗುಡ್ಡೆ ಎಂಬಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಬಾಲಕನನ್ನು ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಖಂಡಿಗ ಮನೆಯ ಗಗನ್(14) ಎಂದು ಗುರುತಿಸಲಾಗಿದೆ.
ಗುರುವಾರ ಎಂದಿನಂತೆ ಶಾಲೆಗೆ ತೆರಳಿದ್ದ ಗಗನ್ ಶಾಲೆಯಿಂದ ಮನೆಗೆ ಬಂದು ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ಮೃತದೇಹವನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದ ಶವಾಗಾರದಲ್ಲಿ ಇರಿಸಲಾಗಿದೆ. ಸ್ಥಳಕ್ಕೆ ಕಡಬ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.