×
Ad

ನ.17 ಕ್ಕೆ ಬಂಟ್ವಾಳ ತಾಲೂಕು ಸಂಯುಕ್ತ ಜಮಾಅತ್ : ಮಿಲಾದ್ ಪ್ರಯುಕ್ತ ಹಮ್ಮಿಕೊಂಡ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣಾ ಸಮಾರಂಭ

Update: 2023-11-16 11:57 IST

ಬಂಟ್ವಾಳ ತಾಲೂಕು ಸಂಯುಕ್ತ ಜಮಾಅತ್ ಕಮಿಟಿ ಇದರ ವತಿಯಿಂದ ಮಿಲಾದ್ ಪ್ರಯುಕ್ತ ದ.ಕ.ಜಿಲ್ಲಾ ಮಟ್ಟದ ಕಾಲೇಜು ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣಾ ಸಮಾರಂಭ ನ. 17 ರಂದು ಫರಂಗಿಪೇಟೆಯ ಸುಹಾ ಕಾಂಪ್ಲೆಕ್ಸ್ ನಲ್ಲಿ ಸಂಜೆ 4 00 ಕ್ಕೆ ನಡೆಯಲಿದೆ.

ತುಂಬೆ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಕೆ.ಎನ್. ಗಂಗಾಧರ ಆಳ್ವ ಬಹುಮಾನ ವಿತರಿಸಲಿದ್ದು, ಸಂಯುಕ್ತ ಜಮಾಅತ್ ಕಮಿಟಿ ಅಧ್ಯಕ್ಷ ಹಾಜಿ ಮುಹಮ್ಮದ್ ಹನೀಫ್ ಗೋಳ್ತಮಜಲು ಅಧ್ಯಕ್ಷತೆ ವಹಿಸುವರು.

ಫರಂಗಿಪೇಟೆ ಮುಹಿಯುದ್ದೀನ್ ಜುಮಾ ಮಸೀದಿ ಅಧ್ಯಕ್ಷ ಉಮ್ಮರ್ ಫಾರೂಕ್, ಉದ್ಯಮಿ ಆಶಿರ್ ಮೇಲ್ಮನೆ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಸಂಯುಕ್ತ ಜಮಾಅತ್ ಪ್ರಧಾನ ಕಾರ್ಯದರ್ಶಿ ನೋಟರಿ ಅಬೂಬಕ್ಕರ್ ವಿಟ್ಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News