×
Ad

ಜ.17ರಿಂದ ಕರ್ನಾಟಕ ಕ್ರೀಡಾಕೂಟ ಆರಂಭ: ಮುಖ್ಯಮಂತ್ರಿಯಿಂದ ಚಾಲನೆ

Update: 2025-01-16 20:05 IST

ಮಂಗಳೂರು: ದ.ಕ. ಮತ್ತು ಉಡುಪಿ ಜಿಲ್ಲಾಡಳಿತ, ಕರ್ನಾಟಕ ಒಲಿಂಪಿಕ್ ಸಂಸ್ಥೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಜ.17ರಿಂದ 23ರವರೆಗೆ ಮಂಗಳೂರು ಮತ್ತು ಉಡುಪಿಯಲ್ಲಿ ನಡೆಯಲಿರುವ ಕರ್ನಾಟಕ ಕ್ರೀಡಾಕೂಟ- 2025ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.

ಜ.17ರಂದು ಸಂಜೆ 5ಕ್ಕೆ ನಗರದ ಮಂಗಳಾ ಕ್ರೀಡಾಂಗಣದಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಕ್ರೀಡಾ ಜ್ಯೋತಿ ಪ್ರಜ್ವಲಿಸಲಿದ್ದಾರೆ. ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ಫರೀದ್ ಕ್ರೀಡಾ ಧ್ವಜಾರೋಹಣ ನೆರವೇರಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹಾಗೂ ವಿಧಾನ ಪರಿಷತ್ ಶಾಸಕ ಹಾಗೂ ಮುಖ್ಯಂತ್ರಿಯವರ ರಾಜಕೀಯ ಕಾರ್ಯದರ್ಶಿ ಡಾ. ಕೆ. ಗೋವಿಂದರಾಜ್‌ರ ಉಪಸ್ಥಿತರಿರುವರು. ಶಾಸಕ ಡಿ. ವೇದವ್ಯಾಸ ಕಾಮತ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News