ಸೆ.17: ಸಾಮಾಜಿಕ, ಶೈಕ್ಷಣಿಕ, ಆದಾಯ, ಉದ್ಯೋಗ ಸಮೀಕ್ಷೆ ಬಗ್ಗೆ ಸಮಾಲೋಚನಾ ಸಭೆ
Update: 2025-09-15 21:21 IST
ಮಂಗಳೂರು, ಸೆ.15: ರಾಜ್ಯ ಸರಕಾರವದ ಹಿಂದುಳಿದ ವರ್ಗಗಳ ಆಯೋಗವು ಸೆ.22ರಿಂದ ಆರಂಭಿಸಲಿರುವ ಸಾಮಾಜಿಕ, ಶೈಕ್ಷಣಿಕ, ಆದಾಯ, ಉದ್ಯೋಗ ಇತ್ಯಾದಿ ಸಮೀಕ್ಷೆಯ ಬಗ್ಗೆ ಸಮಾಲೋಚನಾ ಸಭೆಯು ಸೆ.17 ರಂದು ಸಂಜೆ 4:30ಕ್ಕೆ ನಗರದ ಕೋಡಿಯಾಲ್‌ಬೈಲ್‌ನಲ್ಲಿರುವ ಯೆನೆಪೋಯ ಆಸ್ಪತ್ರೆಯ ಸಭಾಂಗಣದಲ್ಲಿ ನಡೆಯಲಿದೆ.
ಈ ಸಭೆಯಲ್ಲಿ ಹಿಂದುಳಿದ ವರ್ಗಗಳ ಆಯೋಗದ ಹಿರಿಯ ಅಧಿಕಾರಿಗಳು ಮಾಹಿತಿ ನೀಡಲಿದ್ದಾರೆ. ಸ್ಪೀಕರ್ ಯು.ಟಿ.ಖಾದರ್ ಉಪಸ್ಥಿತರಿರುವರು ಎಂದು ಝೀನತ್ ಬಕ್ಷ್ ಕೇಂದ್ರ ಜುಮಾ ಮಸೀದಿಯ ಅಧ್ಯಕ್ಷ ಡಾ. ಹಾಜಿ ವೈ. ಅಬ್ದುಲ್ಲಾ ಕುಂಞಿ ಮತ್ತು ದಿ ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಹಾಜಿ ಕೆ.ಎಸ್. ಮುಹಮ್ಮದ್ ಮಸೂದ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.