×
Ad

ಜ.17-18: ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪ್ರವಾಸ

Update: 2025-01-15 21:33 IST

ಮಂಗಳೂರು,ಜ.15: ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಜ.17 ಮತ್ತು 18 ರಂದು ಜಿಲ್ಲೆಗೆ ಆಗಮಿಸಲಿದ್ದಾರೆ.

ಅಂದು ಬೆಳಗ್ಗೆ 10:30ಕ್ಕೆ ಮಂಗಳೂರು ವಿಮಾನ ನಿಲ್ದಾಣ ಆಗಮಿಸುವರು. ಪೂರ್ವಾಹ್ನ 11:30ಕ್ಕೆ ಮೇರಿಹಿಲ್‌ನಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯದ ಮಂಗಳೂರು ಪ್ರಾದೇಶಿಕ ಕಚೇರಿ ಕಟ್ಟಡ ಶಿಲಾನ್ಯಾಸ ಮತ್ತು ಮಧ್ಯಾಹ್ನ 12:15ಕ್ಕೆ ನಗರದ ಪುರಭವನದಲ್ಲಿ ನಡೆಯುವ ಬಹುಸಂಸ್ಕೃತಿ ಉತ್ಸವ - ಕರ್ನಾಟಕ ಸುವರ್ಣ ಸಂಭ್ರಮ 50 ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಅಪರಾಹ್ನ 3ಕ್ಕೆ ಮೂಡುಬಿದಿರೆಯಲ್ಲಿ ಹಕ್ಕುಪತ್ರ ವಿತರಣೆ ಕಾರ್ಯಕ್ರಮ, 3:45ಕ್ಕೆ ಮೂಡುಬಿದಿರೆ ನಗರ ಯೋಜನಾ ಪ್ರಾಧಿಕಾರ ಕಚೇರಿ ಭೇಟಿ, ಸಂಜೆ 5ಕ್ಕೆ ಮಂಗಳಾ ಕ್ರೀಡಾಂಗಣದಲ್ಲಿ ಕರ್ನಾಟಕ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಜ.18ರಂದು ಬೆಳಗ್ಗೆ 10ಕ್ಕೆ ಬೆಳ್ತಂಗಡಿ ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರ ಕಟ್ಟಡ ಶಂಕುಸ್ಥಾಪನೆ, ಪೂ.11ಕ್ಕೆ ಬೆಳ್ತಂಗಡಿ ತಾಲೂಕು ಆಸ್ಪತ್ರೆ ಆವರಣದಲ್ಲಿ ಸಾರ್ವಜನಿಕ ಆರೋಗ್ಯ ಪ್ರಯೋಗಾಲಯದ ಉದ್ಘಾಟನೆ, ಮಧ್ಯಾಹ್ನ 12:30ಕ್ಕೆ ಬೆನಕ ಆರೋಗ್ಯ ಕೇಂದ್ರ ತುರ್ತು ಚಿಕಿತ್ಸಾ ವಿಭಾಗದ ಉದ್ಘಾಟನೆ, ಸಂಜೆ 4ಕ್ಕೆ ತಣ್ಣೀರುಬಾವಿ ಬೀಚ್‌ನಲ್ಲಿ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ, ಸಂಜೆ 5ಕ್ಕೆ ಪುರಭವನದಲ್ಲಿ ಬ್ಯಾರೀಸ್ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವದಲ್ಲಿ ಪಾಲ್ಗೊಳ್ಳುವರು. ಬಳಿಕ ಸಂಜೆ 6ಕ್ಕೆ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News