ಜ.19: ಅವಿಭಜಿತ ದಕ್ಷಿಣ ಕನ್ನಡದ ಮಹಿಳಾ ಚಿಂತನೆ ಕೃತಿ ಬಿಡುಗಡೆ
Update: 2025-01-17 20:26 IST
ಮಂಗಳೂರು: ಬಹು ಓದು ಬಳಗ ಮಂಗಳೂರು ವತಿಯಿಂದ ಆಕೃತಿ ಆಶಯ ಪಬ್ಲಿಕೇಶನ್ ಮಂಗಳೂರು ಸಹಯೋಗ ದೊಂದಿಗೆ ಡಾ. ಸತೀಶ್ ಚಿತ್ರಾಪು ಮತ್ತು ಸೋಮಶೇಖರ್ ಹಾಸನಡ್ಕ ಸಂಪಾದಿಸಿದ ಱಅವಿಭಜಿತ ದಕ್ಷಿಣ ಕನ್ನಡದ ಮಹಿಳಾ ಚಿಂತನೆೞ ಕೃತಿ ಬಿಡುಗಡೆ ಕಾರ್ಯಕ್ರಮವು ನಗರದ ಸಂತ ಅಲೋಶಿಯಸ್ ಕಾಲೇಜಿನ ರಾಬರ್ಟ್ ಸಿಕ್ವೇರಾ ಹಾಲ್‌ನಲ್ಲಿ ಜ.19ರಂದು ಬೆಳಗ್ಗೆ 10ಕ್ಕೆ ನಡೆಯಲಿದೆ.
ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿವಿಯ ವಿಶ್ರಾಂತ ಕುಲಪತಿ ಪ್ರೊ. ಸಬೀಹಾ ಭೂಮಿಗೌಡ ಕೃತಿ ಬಿಡುಗಡೆ ಗೊಳಿಸಲಿದ್ದಾರೆ. ಮಂಗಳೂರು ವಿವಿ ಎಸ್‌ವಿಪಿ ಕನ್ನಡ ಅಧ್ಯಯನ ಸಂಸ್ಥೆಯ ಅಧ್ಯಕ್ಷ ಪ್ರೊ. ಸೋಮಣ್ಣ ಹೊಂಗಳ್ಳಿ ಅಧ್ಯಕ್ಷತೆ ವಹಿಸಲಿದ್ದಾರೆ. ಮಂಗಳೂರು ವಿವಿ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಪ್ರೊ. ರಾಜಲಕ್ಷ್ಮಿ ಎನ್.ಕೆ. ಪುಸ್ತಕ ವಿಮರ್ಶೆ ಮಾಡಲಿ ದ್ದಾರೆ. ಸುರತ್ಕಲ್ ಗೋವಿಂದದಾಸ್ ಕಾಲೇಜಿನ ಪ್ರಾಂಶುಪಾಲ ಕೃಷ್ಣಮೂರ್ತಿ ಪಿ. ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಪ್ರಕಾಶಕ ಕಲ್ಲೂರು ನಾಗೇಶ್ ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.