ಅ.19ರಂದು ಕುಪ್ಮಾ ಸಮಿತಿ ಪದಗ್ರಹಣ ಸಮಾರಂಭ
ಮಂಗಳೂರು, ಅ.15: ದಕ್ಷಿಣ ಕನ್ನಡ ಜಿಲ್ಲಾ ಕುಪ್ಮಾ ಸಮಿತಿ ಪದಗ್ರಹಣ ಸಮಾರಂಭ ಅ.19 ರಂದು ಬೆಳಗ್ಗೆ 11 ಗಂಟೆಯಿಂದ ನಗರದ ಕೊಡಿಯಾಲಬೈಲ್ ನಲ್ಲಿರುವ ಓಷಿಯನ್ ಪರ್ಲ್ ಹೋಟೆಲ್ ನಲ್ಲಿ ನಡೆಯಲಿದೆ.
ಕುಪ್ಮಾ ಅಧ್ಯಕ್ಷ ಯುವರಾಜ್ ಜೈನ್ ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿ, ವಿಧಾನ ಪರಿಷತ್ ಸದಸ್ಯ ಭೋಜೆ ಗೌಡ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ದಕ್ಷಿಣ ಕನ್ನಡ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ರಾಜೇಶ್ವರಿ ಎಚ್.ಎಚ್., ರಾಜ್ಯ ಕುಪ್ಮಾ ಸಮಿತಿಯ ಗೌರವಾಧ್ಯಕ್ಷರಾದ ಕೆ. ರಾಧಾಕೃಷ್ಣ ಶೆಣೈ, ಡಾ. ಎಂ.ಬಿ. ಪುರಾಣಿಕ್, ಡಾ. ಕೆ.ಸಿ. ನಾಯ್ಕ್, ಕಾರ್ಯದರ್ಶಿ ಪ್ರೊ. ನರೇಂದ್ರ ಎಲ್. ನಾಯಕ್ ಭಾಗವಹಿಸಲಿ ದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಪ್ಮಾ ರಾಜ್ಯ ಸಮಿತಿಯ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಅವರು ವಹಿಸಿಕೊಳ್ಳಲಿದ್ದಾರೆ ಎಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ಹಾಜರಾಗಲಿಚ್ಛಿಸುವವರು ಇಮೇಲ್ mailto:emailkupma.org ಮೂಲಕ ಖಚಿತಪಡಿಸಬಹುದು. ಈ ವರ್ಷ ರಾಜ್ಯದ ಸುಮಾರು 1000 ಕಾಲೇಜುಗಳನ್ನು ಕುಪ್ಮಾ ಜೊತೆ ಜೋಡಣೆ ಮಾಡುವ ನಿಟ್ಟಿನಲ್ಲಿ ಕೆಲಸ ಸಾಗಲಿದೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಕುಪ್ಮಾಕಾರ್ಯದರ್ಶಿಡಾ. ಮಂಜುನಾಥ್ ಎಸ್. ರೇವಣ್ಕರ್, ಉಪಾಧ್ಯಕ್ಷ ರವೀಂದ್ರ ಪಿ., ಖಚಾಂಚಿ ರಮೇಶ್ ಕೆ., ಸಂಯೋಜಕ ಕರುಣಾಕರ ಬಳ್ಕೂರು ಉಪಸ್ಥಿತರಿದ್ಧರು.