ಜ.21ರ ಕಾಂಗ್ರೆಸ್ ಸಮಾವೇಶ ಮುಂದೂಡಿಕೆ
Update: 2024-01-15 21:49 IST
ಮಂಗಳೂರು: ಕೆಪಿಸಿಸಿ ವತಿಯಿಂದ ನಗರದಲ್ಲಿ ಜ.21ರಂದು ನಡೆಸಲು ಉದ್ದೇಶಿಸಲಾಗಿದ್ದ ರಾಜ್ಯ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಮುಂದೂಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.