×
Ad

ಜ.22 ರಂದು ಬಜಗೋಳಿ ಅಯ್ಯಪ್ಪಸ್ವಾಮಿ ಮಂದಿರದಲ್ಲಿ ರಾಮೋತ್ಸವ ಕಾರ್ಯಕ್ರಮ

Update: 2024-01-12 21:35 IST

ಕಾರ್ಕಳ: ಬಜಗೋಳಿ ಅಯ್ಯಪ್ಪ ಸ್ವಾಮಿ ಮಂದಿರದಲ್ಲಿ ಜ.22ರಂದು ರಾಮೋತ್ಸವ ಕಾರ್ಯಕ್ರಮ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ಫೆಡರೇಶನ್ ಆಫ್ ಕರ್ನಾಟಕ ಕ್ವಾರಿ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಶನ್ (ರಿ.) ರಾಜ್ಯಾಧ್ಯಕ್ಷ ಡಾ. ರವೀಂದ್ರ ಶೆಟ್ಟಿ, ಬಜಗೋಳಿ ಹೇಳಿದರು.

ಅವರು ಶುಕ್ರವಾರ ಪ್ರಕಾಶ್ ಹೋಟೆಲ್ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸುಮಾರು 500 ವರ್ಷಗಳ ಕಾಲ ನಡೆದ ಸಾವಿರಾರು ಬಲಿದಾನ ಹಾಗೂ ಹೋರಾಟದ ಫಲವಾಗಿ ಇಂದು ಅಯೋಧ್ಯೆ ಯಲ್ಲಿ ಭವ್ಯ ಮಂದಿರದ ನಿರ್ಮಾಣವಾಗುತ್ತಿದೆ. ಸೌಹಾರ್ದತೆ, ಜಾತ್ಯಾತೀತವಾಗಿ ಭವ್ಯ ರಾಮ ಮಂದಿರ ನಿರ್ಮಾಣವಾಗುತ್ತಿರುವುದು ಭಾರತದ ಸೌಹಾರ್ದತೆಗೆ ಹೊಸ ಮೈಲುಗಲ್ಲಾಗಿದೆ ಎಂದರು.

ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಟ್ರಸ್ಟ್ ಉದ್ಘಾಟನೆಯನ್ನು ಕನ್ಯಾನ ಸದಾಶಿವ ಶೆಟ್ಟಿ ಉದ್ಘಾಟಿಸಲಿದ್ದು, ಹಿಂದೂ ಧರ್ಮ ಶಿಕ್ಷಣ ಅಭಿಯಾನಕ್ಕೆ ಉದ್ಯಮಿ ಬಿ.ನಾಗರಾಜ ಶೆಟ್ಟಿ ಚಾಲನೆ ನೀಡಲಿದ್ದಾರೆ. ಸಭಾ ಕಾರ್ಯಕ್ರಮವನ್ನು ಉದ್ಯಮಿ ಗಣೇಶ್ ಕಾಮತ್ ಉದ್ಘಾಟಿಸಲಿದ್ದು, ಸಮಾರಂಭದ ಅಧ್ಯಕ್ಷತೆಯನ್ನು ಡಾ. ರವೀಂದ್ರ ಶೆಟ್ಟಿ ಬಜಗೋಳಿ ವಹಿಸಲಿದ್ದಾರೆ, ಮುಖ್ಯ ಅತಿಥಿಗಳಾಗಿ ರಾಮಕೃಷ್ಣ ಆಚಾರ್, ಸುನೀಲ್ ಕೆ.ಆರ್, ಮಹಾವೀರ್ ಜೈನ್, ಉಮೇಶ್ ರಾವ್, ಸುನೀಲ್ ಕುಮಾರ್ ಸೇರಿದಂತೆ ಹಲವಾರು ಗಣ್ಯರು ಭಾಗವಹಿಸಲಿದ್ದಾರೆ ಎಂದರು.‌

ಸುದ್ದಿಗೋಷ್ಠಿಯಲ್ಲಿ ಗುರುಪ್ರಸಾದ್ ನಾರವಿ, ಸುರೇಶ್ ಸಾಲ್ಯಾನ್, ರಜತ್ ರಾಮ್ ಮೋಹನ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News