ಫೆ.22ರಿಂದ ಇರ್ದೆ ಪಳ್ಳಿತ್ತಡ್ಕ ದರ್ಗಾ ಶರೀಫ್ ಉರೂಸ್ ಸಮಾರಂಭ
ಪುತ್ತೂರು: ಇರ್ದೆ ಪಳ್ಳಿತ್ತಡ್ಕ ವಲಿಯುಲ್ಲಾಹಿರವರ 48ನೇ ಉರೂಸ್ ಸಮಾರಂಭವು ಫೆ.22ರಿಂದ 28ರ ತನಕ ಧಾರ್ಮಿಕ ಮತ ಪ್ರಭಾಷಣಗಳೊಂದಿಗೆ ಇರ್ದೆ ಪಳ್ಳಿತ್ತಡ್ಕ ದರ್ಗಾ ಶರೀಫ್ ವಠಾರದಲ್ಲಿ ನಡೆಯಲಿದೆ ಎಂದು ಮಸೀದಿ ಕಮಿಟಿ ಸದಸ್ಯ ಆಲಿಕುಂಞಿ ಕೊರಿಂಗಿಲ ತಿಳಿಸಿದ್ದಾರೆ.
ಅವರು ಸೋಮವಾರ ಪುತ್ತೂರು ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಫೆ.22ರಂದು ಅಸ್ಸಯ್ಯದ್ ಹಾಶಿಂ ಬಾಅಲವಿ ತಂಙಳ್ ಕೊರಿಂಗಿಲ ದುವಾ ನೆರವೇರಿಸಲಿದ್ದಾರೆ. ಕೊರಿಂಗಿಲ ಮಸೀದಿ ಖತೀಬ್ ಜಿ.ಎಚ್. ಅಯ್ಯೂಬ್ ವಹಬಿ ಗಡಿಯಾರ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಜಮಾಅತ್ ಕಮಿಟಿ ಮಹಮ್ಮದ್ ಕುಂಞಿ ಹಾಜಿ ಕೊರಿಂಗಿಲ ಅಧ್ಯಕ್ಷತೆ ವಹಿಸಲಿದ್ದಾರೆ. ಹಾಫಿಳ್ ಮಶ್ಹೂದ್ ಸಖಾಫಿ ಗುಡಲ್ಲೂರು ಮುಖ್ಯ ಪ್ರಭಾಷಣ ಮಾಡಲಿದ್ದಾರೆ. ಫೆ.23ರಂದು ಅಬೂಬಕ್ಕರ್ ಸಿದ್ದೀಕ್ ಅಝ್‍ಹರಿ ಪಯ್ಯನ್ನೂರು, ಫೆ. 24ರಂದು ಶಮೀರ್ ದಾರಿಮಿ ಕೊಲ್ಲಂ, ಫೆ. 25ರಂದು ಖಾರಿಹ್ ಮುಸ್ತಫಾ ಸಖಾಫಿ, ತೆನ್ನಲ ಮಲಪ್ಪುರಂ ಮುಖ್ಯ ಪ್ರಭಾಷಣ ಮಾಡಲಿದ್ದಾರೆ.
ಫೆ.26ರಂದು ಮಸೀದಿ ಕಮಿಟಿಯಲ್ಲಿ ಹಲವಾರು ವರ್ಷಗಳ ಸೇವೆ ಸಲ್ಲಿಸಿದ್ದ ಕಮಿಟಿ ಪ್ರಧಾನ ಕಾರ್ಯದರ್ಶಿಯಾಗಿದ್ದ ಮರ್‍ಹೂಂ ಖಾಸಿಂ ಕೇಕನಾಜೆ ಅವರ ಅನುಸ್ಮರಣಾ ಕಾರ್ಯಕ್ರಮ ನಡೆಯಲಿದೆ. ಅನ್ವರ್ ಮುಹ್ಯದ್ದೀನ್ ಹುದವಿ ಅಲಪ್ಪುಝ ಮುಖ್ಯ ಪ್ರಭಾಷಣ ಮಾಡಲಿದ್ದಾರೆ. ಫೆ.27ರಂದು ಅಸಯ್ಯದ್ ಅಹ್ಮದ್ ಪೂಕೋಯ ತಂಙಳ್ ದುವಾಶೀರ್ವಚನ ನೀಡಲಿ ದ್ದಾರೆ. ನೌಫಲ್ ಸಖಾಫಿ ಕಳಸ ಮುಖ್ಯ ಪ್ರಭಾಷಣ ಮಾಡಲಿದ್ದಾರೆ.
ಫೆ. 28ರಂದು ಸಮಾರೋಪ ಸಮಾರಂಭ ನಡೆಯಲಿದ್ದು, ಸಂಜೆ ಜಿ.ಎಚ್.ಅಯ್ಯೂಬ್ ವಹಬಿ ನೇತೃತ್ವದಲ್ಲಿ ಮೌಲೂದ್ ಪಾರಾಯಣ ನಡೆಯಲಿದೆ. ಬಳಿಕ ಸೌಹಾರ್ಧ ಸಂಗಮ ನಡೆಯಲಿದ್ದು, ಕಾರ್ಯಕ್ರಮವನ್ನು ಅಸ್ಸಯ್ಯದ್ ಹಾಶಿಂ ಬಾಅಲವಿ ತಂಙಳ್ ಕೊರಿಂಗಿಲ ಉದ್ಘಾಟಿಸಲಿದ್ದಾರೆ. ರಾಜ್ಯ ತರಬೇತುದಾರ ಇಕ್ಬಾಲ್ ಬಾಳಿಲ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ರಾಧಾಕೃಷ್ಣ ರೈ ಆನಾಜೆ, ಕರ್ನಾಟಕ ಸರ್ಕಾರ ವಿಧಾನ ಸಭಾ ಅಧ್ಯಕ್ಷ ಯು.ಟಿ. ಖಾದರ್, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಮಂಜೇಶ್ವರ ಶಾಸಕ ಅಶ್ರಫ್ ಎಕೆಎಂ, ಕುದ್ರೋಳಿ ಗೋಕರ್ಣ ನಾಥೇಶ್ವರ ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್ ಆರ್, ಗಣ್ಯರಾದ ಎಂ.ಬಿ.ವಿಶ್ವನಾಥ ರೈ, ಹೇಮನಾಥ ಶೆಟ್ಟಿ ಕಾವು, ರಕ್ಷಣ್ ರೈ ಆನಾಜೆ, ಎಂ.ಎಸ್. ಮಹಮ್ಮದ್, ಮಹಮ್ಮದ್ ಬಡಗನ್ನೂರು ಮತ್ತಿತರರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
48ನೇ ಉರೂಸ್ ಸಮಾರಂಭವನ್ನು ಅಸ್ಸಯ್ಯದ್ ಹಾಶಿಂ ಬಾಅಲವಿ ತಂಙಳ್ ಕೊರಿಂಗಿಲ ಉದ್ಘಾಟಿಸಲಿದ್ದಾರೆ. ಅಸ್ಸಯ್ಯದ್ ಕೆ.ಎಸ್. ಆಟಕೋಯ ತಂಙಳ್ ಕುಂಬೋಲ್ ಅಧ್ಯಕ್ಷತೆ ವಹಿಸಲಿದ್ದಾರೆ. ಕಲೀಲ್ ಹುದವಿ ಕಾಸರಗೋಡು ಮುಖ್ಯ ಪ್ರಭಾಷಣ ನೀಡಲಿದ್ದಾರೆ. ಅಸ್ಸಯ್ಯದ್ ಸವಾದ್ ತಂಙಳ್ ಪಾನೂರು ಕೇರಳ ಮತ್ತಿತರ ಗಣ್ಯರು ಉಪಸ್ಥಿತರಿರು ತ್ತಾರೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಕೊರಿಂಗಿಲ ಮಸೀದಿ ಜಮಾಅತ್ ಕಮಿಟಿ ಅಧ್ಯಕ್ಷ ಮಹಮ್ಮದ್ ಕುಂಞಿ ಹಾಜಿ ಕೊರಿಂಗಿಲ, ಕಾರ್ಯ ದರ್ಶಿ ಮೂಸೆಕುಂಞಿ ಬೆಟ್ಟಂಪಾಡಿ, ಉರೂಸ್ ಕಮಿಟಿ ಅಧ್ಯಕ್ಷ ಶಾಫಿ ಕೇಕನಾಜೆ, ಪ್ರಧಾನ ಕಾರ್ಯದರ್ಶಿ ಅಬ್ದುಲ್ ಅಝೀಝ್ ಪಿಎಂ ಉಪಸ್ಥಿತರಿದ್ದರು.